ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ: ರಾಣಾ ಗೋಸ್ವಾಮಿ ಬಿಜೆಪಿ ಉಪಾಧ್ಯಕ್ಷ

Published 3 ಮಾರ್ಚ್ 2024, 3:10 IST
Last Updated 3 ಮಾರ್ಚ್ 2024, 3:10 IST
ಅಕ್ಷರ ಗಾತ್ರ

ಗುವಾಹಟಿ: ಅಸ್ಸಾಂನಲ್ಲಿ ಎರಡು ದಿನಗಳ ಹಿಂದೆ ಆಡಳಿತಾರೂಢ ಬಿಜೆಪಿಗೆ ಸೇರಿದ ಎಐಸಿಸಿ ಮಾಜಿ ಕಾರ್ಯದರ್ಶಿ ರಾಣಾ ಗೋಸ್ವಾಮಿ ಅವರನ್ನು ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ನೇಮಿಸಲಾಗಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ಭಾಬೇಶ್ ಕಲಿತಾ ಅವರು ರಾಣಾ ಗೋಸ್ವಾಮಿ ಅವರನ್ನು ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್‌ ಕಾರ್ಯಾಧ್ಯಕ್ಷರಾಗಿದ್ದ ಗೋಸ್ವಾಮಿ ಅವರು ಎರಡು ದಿನಗಳ ಹಿಂದಷ್ಟೇ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. 

ಕಾಂಗ್ರೆಸ್‌ನಲ್ಲಿ ನಾಯಕತ್ವದ ಕೊರತೆ ಇದೆ. ಈ ಕಾರಣದಿಂದಲೇ ಕಾಂಗ್ರೆಸ್‌ನ ಪ್ರಮುಖ ನಾಯಕರಾದ ಆಜಾದ್‌, ಸಿಂಧಿಯಾ ಸೇರಿದಂತೆ ಹಲವಾರು ನಾಯಕರು ಪಕ್ಷ ತೊರೆಯಬೇಕಾಯಿತು ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT