ಲಖನೌ: ಉತ್ತರ ಪ್ರದೇಶದ ಬಲಿಯಾ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ರಾಮ್ ಇಕ್ಬಾಲ್ ಸಿಂಗ್ ಅವರು ತಮ್ಮ ಸಹವರ್ತಿಗಳ ಜೊತೆ ಸಮಾಜವಾದಿ ಪಕ್ಷವನ್ನು (ಎಸ್ಪಿ)ಸೋಮವಾರ ಸೇರಿದರು.

ಈ ಕುರಿತು ಟ್ವೀಟ್ ಮಾಡಿರುವ ಎಸ್ಪಿ, ‘ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ನಾಯಕತ್ವದಲ್ಲಿ ನಂಬಿಕೆ ಇಟ್ಟುರಾಮ್ ಇಕ್ಬಾಲ್ ಸಿಂಗ್ ಅವರು ಅವರ ಸಹಚರರ ಜೊತೆ ಎಸ್ಪಿ ಸೇರಿದ್ದಾರೆ. ಎಸ್ಪಿಯ ಸಹ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ’ ಎಂದಿದೆ.

ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಕಟು ಟೀಕಾಕಾರರಾಗಿದ್ದ ಅವರು, ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಕೈವಾಡ ಇದೆ ಎಂದು ಆರೋಪಿಸಿದ್ದರು. ಮಿಶ್ರಾರನ್ನು ಸಂಪುಟದಿಂದ ಕೈಬಿಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದರು. ರಾಜ್ಯವನ್ನು ಅಧಿಕಾರಿಗಳು ಮುನ್ನಡೆಸುತ್ತಿದ್ದಾರೆ ಎಂದು ಟೀಕಿಸಿದ್ದರು. ಜೊತೆಗೆ, ಕೋವಿಡ್–19 ಎರಡನೇ ಅಲೆಯನ್ನು ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದ್ದರು.

ಇವರು ಉತ್ತರ ಪ್ರದೇಶದ ಬಿಜೆಪಿ ಕಾರ್ಯಕಾರಿ ಸಮಿತಿಯ ಸದಸ್ಯರೂ ಆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.