ನವದೆಹಲಿ: ಕಾಂಗ್ರೆಸ್‌ನ ಮಾಜಿ ನಾಯಕಿ ರಾಧಿಕಾ ಖೇರಾ ಮತ್ತು ನಟ ಶೇಖರ್ ಸುಮನ್ ಲೋಕಸಭಾ ಚುನಾವಣೆ ನಡುವೆಯೇ ಬಿಜೆಪಿ ಸೇರಿದ್ದಾರೆ.
ಖೇರಾ ಅವರು ಕಾಂಗ್ರೆಸ್ ಮಾಧ್ಯಮ ವಿಭಾಗದ ರಾಷ್ಟ್ರೀಯ ಸಮನ್ವಯಕಾರರಾಗಿದ್ದರು. ಛತ್ತೀಸ್‌ಗಢದ ನಾಯಕರೊಬ್ಬರ ಜೊತೆಗಿನ ಮನಸ್ತಾಪದ ಹಿನ್ನೆಲೆಯಲ್ಲಿ ಅವರು ಭಾನುವಾರ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.
ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಲು ಇಚ್ಛಿಸಿದ್ದ ನನಗೆ ಪಕ್ಷದ ಕಡೆಯಿಂದ ವಿರೋಧ ವ್ಯಕ್ತವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಬರೆದ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಮಾಧ್ಯಮ ವಿಭಾಗದ ಮುಖ್ಯಸ್ಥ ಅನಿಲ್ ಬಲೂನಿ ಸಮ್ಮುಖದಲ್ಲಿ ಅವರು ಬಿಜೆಪಿ ಸೇರಿದರು.