ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೇಮಂತ್‌ ಸೊರೇನ್ ಸಂಪುಟ ಸೇರಿದ ಚಂಪೈ

ಜಾರ್ಖಂಡ್‌: ಹೇಮಂತ್‌ ಸೊರೇನ್ ನೇತೃತ್ವದ ಸರ್ಕಾರದಲ್ಲಿ ಚಂಪೈ ಸಚಿವ
Published 8 ಜುಲೈ 2024, 15:43 IST
Last Updated 8 ಜುಲೈ 2024, 15:43 IST
ಅಕ್ಷರ ಗಾತ್ರ

ರಾಂಚಿ: ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ನೇತೃತ್ವದ ಜಾರ್ಖಂಡ್‌ ಸರ್ಕಾರದ ಸಂಪುಟ ಸದಸ್ಯರಾಗಿ ರಾಜ್ಯದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್‌ ಮತ್ತು ಇತರ 10 ಶಾಸಕರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. 

ರಾಜಭವನದಲ್ಲಿ ಮುಖ್ಯಮಂತ್ರಿ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾರ್ಖಂಡ್‌ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌ ಅವರು ಪ್ರಮಾಣ ವಚನ ಬೋಧಿಸಿದರು. 

ಜಾರ್ಖಂಡ್‌ನ 13ನೇ ಮುಖ್ಯಮಂತ್ರಿಯಾಗಿ ಹೇಮಂತ್‌ ಸೊರೇನ್ ಅವರು ಜುಲೈ 4ರಂದು ಪ್ರಮಾಣ ವಚನ ಸ್ವೀಕರಿಸಿದರು. ಅದರ ಮುನ್ನಾದಿನ ಚಂಪೈ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 

12 ಮಂದಿ ಸದಸ್ಯರನ್ನು ಒಳಗೊಂಡಿರುವ ಜಾರ್ಖಂಡ್‌ ಸಂಪುಟದಲ್ಲಿ, ಕಾಂಗ್ರೆಸ್‌ ಶಾಸಕರಾದ ಇರ್ಫಾನ್‌ ಅನ್ಸಾರಿ, ದೀಪಕ್ ಪಾಂಡೆ ಸಿಂಗ್‌, ಬೈದ್ಯನಾಥ್‌ ರಾಮ್‌ ಅವರು ಹೊಸಮುಖಗಳು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT