ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್ ಮಾಜಿ ಸಿ.ಎಂ ಹೇಮಂತ್‌ ಸೊರೇನ್‌ಗೆ ಫೆ.22ರವರೆಗೆ ನ್ಯಾಯಾಂಗ ಬಂಧನ

Published 15 ಫೆಬ್ರುವರಿ 2024, 12:53 IST
Last Updated 15 ಫೆಬ್ರುವರಿ 2024, 12:53 IST
ಅಕ್ಷರ ಗಾತ್ರ

ರಾಂಚಿ: ಭೂಹಗರಣ ಪ್ರಕರಣ ಸಂಬಂಧ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ವಿಶೇಷ ಪಿಎಂಎಲ್ಎ ನ್ಯಾಯಾಲಯ ಆದೇಶಿಸಿದೆ.

ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾದ ಕಾರ್ಯನಿರ್ವಾಹಕ ಅಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಯು ಆಗಿರುವ ಹೇಮಂತ್‌ ಸೊರೇನ್ ಬಂಧನದಲ್ಲಿದ್ದಾರೆ.

ಸೊರೇನ್‌ ಅವರನ್ನು ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಗುರುವಾರ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು ಇದೇ 22ರ ವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ. ಅವರ ಜಾಮೀನಿಗಾಗಿ ನಾವು ಅರ್ಜಿ ಸಲ್ಲಿಸಲಿದ್ದೇವೆ’ ಎಂದು ಸೊರೇನ್‌ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಅಡ್ವೊಕೇಟ್‌ ಜನರಲ್‌ ರಾಜೀವ್‌ ರಂಜನ್‌ ತಿಳಿಸಿದರು.

ಸೊರೇನ್‌ ಅವರನ್ನು ರಾಂಚಿಯ ಬಿರ್ಸಾ ಮುಂಡಾ ಕೇಂದ್ರೀಯ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಸೊರೇನ್‌ ಅವರನ್ನು ಜನವರಿ 31ರಂದು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಲಯವು ಇ.ಡಿ. ವಶಕ್ಕೆ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT