ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಮಾಜಿ ಸಚಿವ ಏಕನಾಥ ಖಡಸೆಗೆ ಬೆದರಿಕೆ ಕರೆ, ಪೊಲೀಸರಿಂದ ತನಿಖೆ

Published 17 ಏಪ್ರಿಲ್ 2024, 15:40 IST
Last Updated 17 ಏಪ್ರಿಲ್ 2024, 15:40 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಏಕನಾಥ ಖಡಸೆ ಅವರಿಗೆ ಬೆದರಿಕೆ ಕರೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದರು.

ಸೋಮವಾರ ಅಪರಿಚಿತ ನಂಬರ್‌ನಿಂದ ಅವರಿಗೆ ಬೆದರಿಕೆ ಕರೆ ಬಂದಿದೆ. ಈ ಬೆನ್ನಲ್ಲೇ ಅವರು ಜಲಗಾಂವ್‌ ಜಿಲ್ಲೆಯ ಮುಕ್ತಾಯೀನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ಹೇಳಿದರು.

‘ಕರೆ ಮಾಡಿದ್ದ ಆರೋಪಿ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಮತ್ತು ಛೋಟಾ ಶಕೀಲ್‌ ಅವರ ಹೆಸರನ್ನು ಉಲ್ಲೇಖಿಸಿದ್ದ’ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಸದ್ಯ ಎನ್‌ಸಿಪಿ (ಶರದ್‌ ಪವಾರ್‌ ಬಣ)ಯಲ್ಲಿರುವ ಖಡಸೆ, ಶೀಘ್ರವೇ ಬಿಜೆಪಿಗೆ ಮರಳುವುದಾಗಿ ಇತ್ತೀಚೆಗೆ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT