ಮುಂಬೈ: ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಅನೀಸ್ ಹ್ಮದ್ ಸೋಮವಾರ ಮುಂಬೈನಲ್ಲಿ ವಂಚಿತ್ ಬಹುಜನ ಅಘಾಡಿ (ವಿಬಿಎ) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಪಕ್ಷದ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಅವರ ಸಮ್ಮುಖದಲ್ಲಿ ಸೇರ್ಪಡೆಯಾದ ಅಹ್ಮದ್ ಅವರನ್ನು ಮಹಾರಾಷ್ಟ್ರ ಚುನಾವಣೆಯಲ್ಲಿ ನಾಗ್ಪುರ ಸೆಂಟ್ರಲ್ ಕ್ಷೇತ್ರದಿಂದ ಸ್ವರ್ಧಿಸುವ ವಿಬಿಎ ಅಭ್ಯರ್ಥಿ ಎಂದು ಘೋಷಿಸಲಾಯಿತು.

‘ನಾನು 15 ವರ್ಷಗಳಿಂದ ನಾಗ್ಪುರ ಸೆಂಟ್ರಲ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದೇನೆ. ಮುಸ್ಲಿಂ, ತೆಲಿ ಮತ್ತು ದಲಿತ ಸಮುದಾಯಕ್ಕೆ ಯಾವುದೇ ಪ್ರಾತಿನಿಧ್ಯ ನೀಡದೆ ಕಾಂಗ್ರೆಸ್ ವಿದರ್ಭ ಪ್ರದೇಶದಲ್ಲಿ ಕೆಲವು ಟಿಕೆಟ್ಗಳನ್ನು ಮಾರಾಟ ಮಾಡಿರುವುದನ್ನು ಗಮನಿಸಿದ್ದೇನೆ. ಸಾಮಾಜಿಕ ನ್ಯಾಯ ಒದಗಿಸುವಲ್ಲಿ ವಿಫಲವಾದ ಕಾರಣ ನಾನು ಕಾಂಗ್ರೆಸ್ ತೊರೆಯಲು ನಿರ್ಧರಿಸಿದೆ’ ಎಂದು ಅಹ್ಮದ್ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಕಾಶ್ ಅಂಬೇಡ್ಕರ್, ‘ವಿದರ್ಭ ಪ್ರದೇಶದಲ್ಲಿ ಕಾಂಗ್ರೆಸ್ ಕುಂಬಿಗಳಿಗೆ ಟಿಕೆಟ್ ನೀಡಿ ಇತರ ಸಮುದಾಯಗಳನ್ನು ಕಡೆಗಣಿಸಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.