ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕಾದಳದ ಮಾಜಿ ಮುಖ್ಯಸ್ಥ ಎಲ್. ರಾಮದಾಸ್ ನಿಧನ

ಭಾರತೀಯ ನೌಕಾದಳದ ಮಾಜಿ ಮುಖ್ಯಸ್ಥ (ಚೀಫ್ ಅಡ್ಮಿರಲ್) ಎಲ್. ರಾಮದಾಸ್ ಅವರು ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.
Published 15 ಮಾರ್ಚ್ 2024, 13:57 IST
Last Updated 15 ಮಾರ್ಚ್ 2024, 13:57 IST
ಅಕ್ಷರ ಗಾತ್ರ

ಹೈದರಾಬಾದ್: ಭಾರತೀಯ ನೌಕಾದಳದ ಮಾಜಿ ಮುಖ್ಯಸ್ಥ (ಚೀಫ್ ಅಡ್ಮಿರಲ್) ಎಲ್. ರಾಮದಾಸ್ ಅವರು ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

ವಯೋಸಹಜ ಖಾಯಿಲೆಯಿಂದ ಇತ್ತೀಚೆಗೆ ಹೈದರಾಬಾದ್‌ನ ಸೇನಾ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೇ ಶುಕ್ರವಾರ ಕೊನೆಯುಸಿರೆಳೆದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಮಾರ್ಚ್ 16 ರಂದು ಹೈದರಾಬಾದ್‌ನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿಸಿದ್ದಾರೆ. ಅವರು ಮೂವರು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ.

1990ರಿಂದ 1993ರವರೆಗೆ ಭಾರತೀಯ ನೌಕಾದಳದ ಮುಖ್ಯಸ್ಥರಾಗಿದ್ದ ಎಲ್ ರಾಮದಾಸ್ ಅವರು, 1933ರಲ್ಲಿ ಮುಂಬೈನಲ್ಲಿ ಜನಿಸಿದ್ದರು. 1949ರಲ್ಲಿ ನೌಕಾದಳ ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT