ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ ಶನಿವಾರ ಬೆಳಿಗ್ಗೆ 11.45ಕ್ಕೆ ಸರ್ಕಾರಿ ಗೌರವಗಳೊಂದಿಗೆ ನಿಗಮಬೋಧ್ ಘಾಟ್ ಸ್ಮಶಾನದಲ್ಲಿ ನೆರವೇರಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ಗುರುವಾರ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮನಮೋಹನ್ ಸಿಂಗ್ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು..

ಡಾ. ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲು ಸರ್ಕಾರ ನಿರ್ಧರಿಸಿದೆ. ಅಂತ್ಯಕ್ರಿಯೆಯು ಡಿಸೆಂಬರ್ 28ರಂದು ಬೆಳಿಗ್ಗೆ 11:45ಕ್ಕೆ ನವದೆಹಲಿಯ ನಿಗಮಬೋಧ್ ಘಾಟ್ನಲ್ಲಿ ನಡೆಯಲಿದೆ’ಎಂದು ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್ಎ) ಪ್ರಕಟಣೆಯಲ್ಲಿ ತಿಳಿಸಿದೆ.

ಪೂರ್ಣ ಸೇನಾ ಗೌರವಗಳೊಂದಿಗೆ ಸಿಂಗ್ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಲು ರಕ್ಷಣಾ ಸಚಿವಾಲಯವನ್ನು ಕೋರಲಾಗಿದೆ ಎಂದು ಅದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.