ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ ವಿಧಾನಸಭೆ: ಸ್ಪೀಕರ್ ಆಗಿ ನರೇಂದ್ರ ಸಿಂಗ್ ತೋಮರ್ ಆಯ್ಕೆ

Published 20 ಡಿಸೆಂಬರ್ 2023, 10:20 IST
Last Updated 20 ಡಿಸೆಂಬರ್ 2023, 10:20 IST
ಅಕ್ಷರ ಗಾತ್ರ

ಭೋಪಾಲ್: ಮಧ್ಯಪ್ರದೇಶದ ವಿಧಾನಸಭೆ ಸ್ಪೀಕರ್ ಆಗಿ ಬಿಜೆಪಿ ಹಿರಿಯ ಮುಖಂಡ ನರೇಂದ್ರ ಸಿಂಗ್ ತೋಮರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತೋಮರ್ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡುವ ಪ್ರಸ್ತಾಪ ಮಂಡಿಸಿದರು.  ಇದನ್ನು ಮಾಜಿ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ಅನುಮೋದಿಸಿದರು.

ಕಾಂಗ್ರೆಸ್‌ ನಾಯಕ ಹಾಗೂ ವಿರೋಧ ಪಕ್ಷದ ಮುಖಂಡ ಉಮಂಗ್ ಸಿಂಘಾರ್‌ ಅವರು ಸಹ ತೋಮರ್ ಆಯ್ಕೆಗೆ ಸಹಮತ ವ್ಯಕ್ತಪಡಿಸಿದರು. ತೋಮರ್‌ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರು. 

ಹಂಗಾಮಿ ಸ್ಪೀಕರ್ ಗೋಪಾಲ್ ಭಾರ್ಗವ ಅವರು ತೋಮರ್ ಅವರನ್ನು ಸ್ಪೀಕರ್ ಹುದ್ದೆಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಘೋಷಿಸಿದರು.

66 ವರ್ಷದ ತೋಮರ್‌ 1983ರಲ್ಲಿ ಗ್ವಾಲಿಯರ್‌ ನಗರಸಭೆ ಸದಸ್ಯರಾಗಿ ತಮ್ಮ ರಾಜಕೀಯ ಜೀವನ ಆರಂಭಿಸಿದರು. ತೋಮರ್ ಅವರು ಮಧ್ಯಪ್ರದೇಶದ ಬಿಜೆಪಿಯಲ್ಲಿ ಹಲವು ಉನ್ನತ ಹುದ್ದೆಗಳನ್ನು ನಿರ್ವಹಸಿದ್ದಾರೆ. ಅವರು ಮಧ್ಯಪ್ರದೇಶ ಬಿಜೆಪಿ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ.

ಮಧ್ಯಪ್ರದೇಶ ಬಿಜೆಪಿ ಸರ್ಕಾರದಲ್ಲಿ ತೋಮರ್‌ ಎರಡು ಸಲ ಸಚಿವರಾಗಿದ್ದರು. ಅವರು ಕೇಂದ್ರದ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಈ ಬಾರಿ ಅವರು ದಿಮಾನಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT