ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಮಾಜವಾದಿ ನಾಯಕ ಶರದ್ ಯಾದವ್ ಅಂತ್ಯಕ್ರಿಯೆ

Last Updated 14 ಜನವರಿ 2023, 14:36 IST
ಅಕ್ಷರ ಗಾತ್ರ

ಭೋಪಾಲ್: ಹಿರಿಯ ಸಮಾಜವಾದಿ ನಾಯಕ ಹಾಗೂ ಜೆಡಿಯು ಮಾಜಿ ಅಧ್ಯಕ್ಷ ಶರದ್ ಯಾದವ್ ಅವರ ಅಂತ್ಯಕ್ರಿಯೆ ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ ಅವರ ಪೂರ್ವಜರ ಗ್ರಾಮ ಅಂಖ್‌ಮವುದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ನೆರವೇರಿತು.

ಯಾದವ್ ಅವರ ಪುತ್ರ ಶಂತನು ಬುಂದೇಲಾ ಹಾಗೂ ಪುತ್ರಿ ಸುಭಾಷಿಣಿ ಅವರು ಅಂತ್ಯಕ್ರಿಯೆಯ ವಿಧಿ– ವಿಧಾನಗಳನ್ನು ನೆರವೇರಿಸಿದರು. ಶರದ್ ಯಾದವ್ ಗುರುಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.

ಶರದ್‌ ಯಾದವ್ ಅವರ ಪಾರ್ಥಿವ ಶರೀರವನ್ನು ದೆಹಲಿಯಿಂದ ಭೋಪಾಲ್‌ಗೆ ವಿಮಾನದ ಮೂಲಕ ತರಲಾಯಿತು. ಅಲ್ಲಿಂದ ರಸ್ತೆ ಮಾರ್ಗದಲ್ಲಿ ಅಂಖ್‌ಮವು ಗ್ರಾಮಕ್ಕೆ ಒಯ್ಯಲಾಯಿತು. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಸೇರಿದಂತೆ ಇತರರು ಅಂತಿಮ ದರ್ಶನ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT