ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾ: ನಕ್ಸಲರು–ಯೋಧರ ಮಧ್ಯೆ ಗುಂಡಿನ ಚಕಮಕಿ

Published 23 ಜನವರಿ 2024, 13:09 IST
Last Updated 23 ಜನವರಿ 2024, 13:09 IST
ಅಕ್ಷರ ಗಾತ್ರ

ಭುವನೇಶ್ವರ: ಒಡಿಶಾ ಪೊಲೀಸ್ ಇಲಾಖೆಯ ವಿಶೇಷ ಕಾರ್ಯಾಚರಣೆ ಪಡೆ (ಎಸ್ಒಜಿ) ಮಂಗಳವಾರ ಬೋಧ್ ಜಿಲ್ಲೆಯಲ್ಲಿದ್ದ ನಕ್ಸಲರ ಶಿಬಿರವೊಂದನ್ನು ಪತ್ತೆ ಹಚ್ಚಿದ್ದು, ಎಡಪಂಥೀಯ ತೀವ್ರವಾದಿಗಳು ಮತ್ತು ಪೊಲೀಸರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. 

ಇಲ್ಲಿನ ಸಗಾಡ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಯೋಧರು ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಬೋಧ್–ಕಂಧಮಾಲ್ ಗಡಿಯಲ್ಲಿರುವ ಮಾತಾಕೃಪಾ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಕ್ಸಲರು ಮತ್ತು ಯೋಧರ ಮಧ್ಯೆ 30 ನಿಮಿಷಗಳ ಕಾಲ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಈ ವೇಳೆ ಕಾಲಾಹಂಡಿ–ಕಂಧಮಾಲ್–ಬೋಧ್–ನಯಾಗಢ್ ವಿಭಾಗದ ಸಿಪಿಐನ (ಮಾವೊವಾದಿ) 25–30 ಸದಸ್ಯರು ಶಸ್ತ್ರಾಸ್ತ್ರ ಮತ್ತು ಇತರೆ ವಸ್ತುಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಕೆಲವು ನಕ್ಸಲರು ಗಾಯಗೊಂಡಿರಬಹುದು. ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT