ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಬಿಐ ನಿರ್ಧಾರ ಪ್ರಶ್ನಿಸಿ ಅರ್ಜಿ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

₹ 2 ಸಾವಿರ ನೋಟು ವಿನಿಮಯ
Published 9 ಜೂನ್ 2023, 10:59 IST
Last Updated 9 ಜೂನ್ 2023, 10:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಯಾವುದೇ ಅರ್ಜಿ ಹಾಗೂ ಗುರುತಿನ ಚೀಟಿ ಇಲ್ಲದೆಯೇ ₹ 2 ಸಾವಿರ ಮುಖಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿ ಆರ್‌ಬಿಐ ತೆಗೆದುಕೊಂಡ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ತುರ್ತು ವಿಚಾರಣೆ ನಡೆಸುವುದಕ್ಕೆ ಸುಪ್ರೀಂಕೋರ್ಟ್‌ ಶುಕ್ರವಾರ ನಿರಾಕರಿಸಿತು.

ಈ ವಿಚಾರವಾಗಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ಪಟ್ಟಿಗೆ ಸೇರಿಸುವುದಕ್ಕೆ ಸಂಬಂಧಿಸಿ ರಿಜಿಸ್ಟ್ರಿ ಸಲ್ಲಿಸಿದ್ದ ವರದಿಯನ್ನು ಪರಿಶೀಲಿಸಿದ ನಂತರ ಸುಪ್ರೀಂಕೋರ್ಟ್‌ ಈ ವಿಷಯ ಸ್ಪಷ್ಟಪಡಿಸಿತು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್‌ ಹಾಗೂ ರಾಜೇಶ್ ಬಿಂದಲ್‌ ಅವರಿದ್ದ ರಜಾಕಾಲದ ನ್ಯಾಯಪೀಠ, ಬೇಸಿಗೆ ರಜೆ ಮುಗಿದ ನಂತರ, ಈ ವಿಷಯವನ್ನು ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರಲ್ಲಿ ಮಂಡಿಸುವಂತೆ ಸೂಚನೆ ನೀಡಿತು.

ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಅರ್ಜಿದಾರರೂ ಆದ ವಕೀಲ ಅಶ್ವಿನಿ ಉಪಾಧ್ಯಾಯ ಮನವಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT