ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಸೆಪ್ಟೆಂಬರ್ 3 ರವರೆಗೆ ವಿಸ್ತರಿಸಿದೆ.
ಈ ಹಿಂದೆ ವಿಧಿಸಿದ್ದ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ಕಸ್ಟಡಿಯನ್ನು ವಿಸ್ತರಿಸಿ ಆದೇಶ ನೀಡಿದ್ದಾರೆ.