ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಜುಲೈ 3ರವರೆಗೆ ವಿಸ್ತರಿಸಿದೆ.

ಕವಿತಾ ವಿರುದ್ಧದ ಪ್ರೊಡಕ್ಷನ್ ವಾರಂಟ್ ಆದೇಶದಾನ್ವಯ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ನಂತರ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ನ್ಯಾಯಾಂಗ ಬಂಧನವನ್ನು ಸೋಮವಾರ ವಿಸ್ತರಿಸಿದರು.

ಮೇ 29ರಂದು ಪ್ರಕರಣದಲ್ಲಿ ಬಿಆರ್ಎಸ್ ನಾಯಕಿಯ ವಿರುದ್ಧದ ಚಾರ್ಜ್ ಶೀಟ್ನ ವಿಚಾರಣೆಯ ನಂತರ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.