ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ: ಉದ್ಯಮಿ ಅಮಿತ್ ಅರೋರಾಗೆ ಜಾಮೀನು

Published 8 ಜೂನ್ 2024, 16:22 IST
Last Updated 8 ಜೂನ್ 2024, 16:22 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಉದ್ಯಮಿ ಅಮಿತ್ ಅರೋರಾ ಅವರಿಗೆ ದೆಹಲಿ ನ್ಯಾಯಾಲಯವು ಎರಡು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 

ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ತನಿಖೆ ನಡೆಸುವ ಪ್ರಕರಣಗಳ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು, ‘ಈ ಪ್ರಕರಣದ ಆರೋಪಿ ಹಾಗೂ ಗುರುಗ್ರಾಮ ಮೂಲದ ಬಡ್ಡಿ ರಿಟೇಲ್ ಪ್ರೈವೇಟ್‌ ಲಿಮಿಟೆಡ್‌ನ ನಿರ್ದೇಶಕ ಅಮಿತ್ ಅರೋರಾ ಅವರ ಪತ್ನಿ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದ್ದು, ಆಕೆಯ ಯೋಗಕ್ಷೇಮವನ್ನು ಅರೋರಾ ನೋಡಿಕೊಳ್ಳಬೇಕಿದೆ’ ಎಂದು ಜೂನ್ 6ರಂದು ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ. 

ಪತ್ನಿಯ ಆರೋಗ್ಯದ ದೃಷ್ಟಿ ಹೊರತಾಗಿ, ಯಾವುದೇ ಕಾರಣಕ್ಕೂ ದೆಹಲಿ ರಾಷ್ಟ್ರರಾಜಧಾನಿ ವಲಯವನ್ನು ಬಿಟ್ಟು ಬೇರೆಡೆ ಹೋಗುವಂತಿಲ್ಲ ಎಂದು ಷರತ್ತು ವಿಧಿಸಲಾಗಿದೆ. 

ಇದೇ ಪ್ರಕರಣದ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಾಜಿ ಉಪಮುಖ್ಯ
ಮಂತ್ರಿ ಹಾಗೂ ಎಎಪಿ ಮುಖಂಡ ಮನೀಷ್ ಸಿಸೋಡಿಯಾ ಹಾಗೂ ಬಿಆರ್‌ಎಸ್ ನಾಯಕಿ ಕೆ.ಕವಿತಾ ಸೇರಿದಂತೆ ಇತರರು ನ್ಯಾಯಾಂಗ ಬಂಧನದಲ್ಲಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT