ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಉದ್ಯಮಿ ಅಮನ್ದೀಪ್ ಸಿಂಗ್ ಡಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ಪ್ರಕರಣದಲ್ಲಿ 300 ಸಾಕ್ಷಿಗಳನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದೆ. ಆದರೆ, ಅಮನ್ದೀಪ್ ವಿಚಾರಣೆ ಇನ್ನೂ ಆರಂಭಿಸಿಲ್ಲ ಎಂಬ ಅಂಶವನ್ನು ಪರಿಗಣಿಸಿದೆ.

ಅಮನ್ದೀಪ್ ಒಂದು ವರ್ಷದಿಂದ ಜೈಲಿನಲ್ಲಿದ್ದು, ಪ್ರಕರಣದ ಇತರೆ ಆರೋಪಿಗಳಿಗೆ ಜಾಮೀನು ಸಿಕ್ಕಿದೆ ಎಂದು ಪೀಠ ಹೇಳಿದೆ.

ವಿಚಾರಣಾ ನ್ಯಾಯಾಲಯದ ಷರತ್ತುಗಳನ್ನು ಪಾಲಿಸುವಂತೆ ಸೂಚಿಸಿ, ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಲ್ಲದೆ, ಪ್ರತಿ ವಿಚಾರಣೆ ಸಂದರ್ಭದಲ್ಲೂ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿದೆ.

ಜೂನ್ ತಿಂಗಳಲ್ಲಿ ತಮಗೆ ಜಾಮೀನು ನಿರಾಕರಿಸಿದ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಡಲ್, ಸುಪ್ರೀಂ ಕೋರ್ಟ್ ಮೊರೆಹೋಗಿದ್ದರು.

ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ಡಲ್ ಅವರನ್ನು ಸಿಬಿಐ ಬಂಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.