ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡೀಸೆಲ್ ಮೇಲಿನ ಎಕ್ಸೈಸ್ ಸುಂಕ ಕಡಿತದಿಂದ ಜನರಿಗೆ ನಿರಾಳ: ಅಮಿತ್ ಶಾ

Last Updated 4 ನವೆಂಬರ್ 2021, 7:53 IST
ಅಕ್ಷರ ಗಾತ್ರ

ನವದೆಹಲಿ: ‘ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಎಕ್ಸೈಸ್‌ ಸುಂಕವನ್ನು ಕಡಿಮೆ ಮಾಡಿರುವುದು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿರುವ ಪ್ರಮುಖ ನಿರ್ಧಾರವಾಗಿದೆ. ಈ ಕ್ರಮ ಸಾಮಾನ್ಯ ಜನರಿಗೆ ಸಮಾಧಾನ ತರುವ ಜೊತೆಗೆ ಹಣದುಬ್ಬರವನ್ನೂ ಕಡಿಮೆ ಮಾಡಲಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುರುವಾರ ಇಲ್ಲಿ ಹೇಳಿದರು.

‘ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಎಕ್ಸೈಸ್‌ ಸುಂಕವನ್ನು ಕ್ರಮವಾಗಿ ₹ 5 ಹಾಗೂ ₹ 10 ಕಡಿಮೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರುದೀಪಾವಳಿ ಸಂದರ್ಭದಲ್ಲಿ ಜನರಿಗೆ ಸಮಾಧಾನ ತಂದಿದ್ದಾರೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

‘ಬಿಜೆಪಿ ಆಡಳಿತ ಇರುವ ರಾಜ್ಯಗಳು ಸಹ ಇಂಧನ ದರಗಳಲ್ಲಿ ಮತ್ತಷ್ಟೂ ಕಡಿತಗೊಳಿಸುವ ಮೂಲಕ ಉತ್ತಮ ಕಾರ್ಯ ಮಾಡಿವೆ’ ಎಂದಿದ್ದಾರೆ.

‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಹೆಚ್ಚಾಗುತ್ತಿದ್ದರೂ, ತೈಲೋತ್ಪನ್ನಗಳ ಮೇಲಿನ ಎಕ್ಸೈಸ್‌ ಸುಂಕವನ್ನು ಕಡಿಮೆ ಮಾಡುವಂಥ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿರುವುದಕ್ಕಾಗಿ ನಾನು ಮೋದಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ’ ಎಂದು ಅವರು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT