ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Excise Policy Case: CBIನಿಂದ ಕೇಜ್ರಿವಾಲ್ ಬಂಧನ ಎತ್ತಿಹಿಡಿದ ದೆಹಲಿ ಹೈಕೋರ್ಟ್

Published : 5 ಆಗಸ್ಟ್ 2024, 10:41 IST
Last Updated : 5 ಆಗಸ್ಟ್ 2024, 10:41 IST
ಫಾಲೋ ಮಾಡಿ
Comments

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನ್ನನ್ನು ಬಂಧಿಸಿ ರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿದೆ. 

ಸಿಬಿಐ ನಿರ್ಧಾರವನ್ನು ಎತ್ತಿಹಿಡಿದ ನ್ಯಾಯಮೂರ್ತಿ ನೀನಾ ಬನ್ಸಾಲ್‌ ಕೃಷ್ಣ ಅವರು, ‘ಬಂಧನಕ್ಕೆ ತಡೆ ನೀಡಲು ಕೇಜ್ರಿವಾಲ್ ಸಮರ್ಪಕ ಕಾರಣ ನೀಡಿಲ್ಲ’ ಎಂದು ತಿಳಿಸಿದ್ದಾರೆ.

ಕೇಜ್ರಿವಾಲ್‌ ಜಾಮೀನುಅರ್ಜಿಯನ್ನು ಕೂಡ ವಿಲೇವಾರಿ ಮಾಡಿದ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ಮೊರೆಹೋಗಲು ಅವಕಾಶ ನೀಡಿದೆ.

ಸಿಬಿಐ ಬಂಧನ ಪ್ರಶ್ನಿಸಿದ್ದ ಅರ್ಜಿಯ ವಿಚಾರಣೆಯನ್ನು ಜುಲೈ 17ಕ್ಕೆ ಪೂರ್ಣ ಗೊಳಿಸಿದ್ದ ನ್ಯಾಯಾಲಯವು ತೀರ್ಪನ್ನು ಕಾಯ್ದಿರಿಸಿತ್ತು. ಜುಲೈ 29ರಂದು ಜಾಮೀನು ಅರ್ಜಿ ಕುರಿತಾದ ತೀರ್ಪನ್ನು  ಕಾಯ್ದಿರಿಸಿತ್ತು.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಡಿ ತಿಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಕೇಜ್ರಿವಾಲ್‌ ಅವರನ್ನು ಜೂನ್‌ 26ರಂದು ಸಿಬಿಐ ಬಂಧಿಸಿತ್ತು.

ಸುಪ್ರೀಂ ಕೋರ್ಟ್‌ ಮೊರೆಗೆ ನಿರ್ಧಾರ

‘ಕೇಜ್ರಿವಾಲ್‌ ಜಾಮೀನು ಅರ್ಜಿ ವಿಲೇವಾರಿ ಮತ್ತು ಸಿಬಿಐ ಬಂಧಿಸಿರುವುದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್ ತೀರ್ಪನ್ನು ಪಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು’ ಎಂದು ಎಎಪಿ ತಿಳಿಸಿದೆ.

‘ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಈಗಾಗಲೇ ಸುಪ್ರೀಂ ಕೋರ್ಟ್‌ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನನ್ನು ನೀಡಿದೆ. ಇದೀಗ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಕೇಜ್ರಿವಾಲ್‌ ಸುಪ್ರೀಂ ಕೋರ್ಟ್‌ ಮೊರೆ ಹೋಗಲಿದ್ದಾರೆ’ ಎಂದು ಮಾಹಿತಿ ನೀಡಿದೆ.

‘ಸಿಸೋಡಿಯಾ ಭಾಗಿಯಾಗಿದ್ದಕ್ಕೆ ಸಾಕ್ಷ್ಯಗಳಿವೆ’

ದೆಹಲಿಯ ಅಬಕಾರಿ ನೀತಿ ಹಗರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರು ಭಾಗಿಯಾಗಿದ್ದಕ್ಕೆ ತನ್ನ ಬಳಿ ದಾಖಲೆಗಳಿವೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಹೇಳಿದೆ. ಈ ಮೂಲಕ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದೆ.

ಇ.ಡಿ ಬಂಧನದಲ್ಲಿರುವ ಸಿಸೋಡಿಯಾ, ತಮ್ಮ ಮೇಲೆ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಮತ್ತು ಇ.ಡಿ ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಆರೋಪ ಸೇರಿದಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಜಾಮೀನು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT