ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಬಕಾರಿ ನೀತಿ ಹಗರಣ: ಕೇಜ್ರಿವಾಲ್‌ ಮಧ್ಯಂತರ ಜಾಮೀನು ಅರ್ಜಿಗೆ ED ವಿರೋಧ

Published 1 ಜೂನ್ 2024, 10:27 IST
Last Updated 1 ಜೂನ್ 2024, 10:27 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡುವಂತೆ ಕೋರಿ ಸಲ್ಲಿಕೆಯಾದ ಅರ್ಜಿಗೆ ಜಾರಿ ನಿರ್ದೇಶನಾಲಯ (ED) ಆಕ್ಷೇಪ ವ್ಯಕ್ತಪಡಿಸಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಕಾವೇರಿ ಬವೇಜಾ ಅವರಿದ್ದ ಪೀಠದ ಎದುರು ವಾದ ಮಂಡಿಸಿದ ಜಾರಿ ನಿರ್ದೇಶನಾಲಯ ಪರ ವಕೀಲರು, ‘ಕೇಜ್ರಿವಾಲ್ ಅವರು ವಾಸ್ತಾಂಶವನ್ನು ಮರೆಮಾಚಿ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಇದರಲ್ಲಿ ಅವರ ಆರೋಗ್ಯ ಸಂಬಂಧಿತ ಮಾಹಿತಿಯೂ ಸೇರಿದೆ’ ಎಂದಿದ್ದಾರೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಜಾರಿ ನಿರ್ದೇಶನಾಲಯ ಪರ ವಾದ ಮಂಡಿಸಿದರು. ‘ಜೂನ್ 2ರಂದು ತಾನು ಶರಣಾಗುವುದಾಗಿ ಕೇಜ್ರಿವಾಲ್ ಅವರು ಶುಕ್ರವಾರ ಸುದ್ದಿಗೋಷ್ಠಿ ನಡಸಿ ಹೇಳಿಕೆ ನೀಡಿದ್ದಾರೆ. ಮತ್ತೊಂದೆಡೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಆ ಮೂಲಕ ಕೇಜ್ರಿವಾಲ್ ಅವರು ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ’ ಎಂದು ಪೀಠದ ಗಮನಕ್ಕೆ ತಂದರು. 

ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಆರಂಭಿಸಿದೆ. ಆರೋಗ್ಯ ದುರ್ಬಲವಾಗಿರುವ ಕಾರಣ ನೀಡಿರುವ ಆಮ್ ಆದ್ಮಿ ಪಾರ್ಟಿಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಅದು ಜೂನ್ 1ಕ್ಕೆ ಕೊನೆಗೊಳ್ಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT