ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ಮೇಲ್ಮನಿಯ ವಿಚಾರಣೆಗೆ ಹಾಜರಾಗದ ಎಎಪಿ ನಾಯಕರಾದ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ದುರ್ಗೇಶ್ ಪಾಠಕ್ ಅವರ ಪರವಾಗಿ ವಾದ ಮಂಡಿಸಲು ಹಿರಿಯ ವಕೀಲರನ್ನು ಅಮಿಕಸ್ ಕ್ಯೂರಿಗಳನ್ನಾಗಿ ನೇಮಿಸುವುದಾಗಿ ದೆಹಲಿ ಹೈಕೋರ್ಟ್ ಮಂಗಳವಾರ ತಿಳಿಸಿದೆ.

ಹಿತಾಸಕ್ತಿ ಸಂಘರ್ಷ ಮತ್ತು ಪಕ್ಷಪಾತ ಆತಂಕದ ಕಾರಣ ಮುಂದಿಟ್ಟು ಪ್ರಕರಣದ ವಿಚಾರಣೆ ನಡೆಸುತ್ತಿರುವ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮುಂದೆ ವಿಚಾರಣೆಗೆ ಹಾಜರಾಗಲು ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ದುರ್ಗೇಶ್ ಪಾಠಕ್ ನಿರಾಕರಿಸಿದ್ದಾರೆ. ಈ ಕಾರಣದಿಂದ ಪ್ರತಿವಾದಿಗಳ ಪರ ವಾದಿಸಲು ತಾನೇ ವಕೀಲರನ್ನು ನೇಮಿಸುವುದಾಗಿ ನ್ಯಾಯಾಲಯ ತಿಳಿಸಿದೆ.

ವಿಚಾರಣಾ ನ್ಯಾಯಾಲಯವು ಈ ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಮೇ 8ಕ್ಕೆ ಮುಂದೂಡಿದರು. ಆರೋಪಿಗಳನ್ನು ಪ್ರತಿನಿಧಿಸಲು ಯಾರನ್ನಾದರೂ ವಕೀಲರನ್ನು ನೇಮಿಸಿದ ನಂತರ ಈ ವಿಚಾರಣೆಯನ್ನು ಮುಂದುವರಿಸುವುದು ಸೂಕ್ತ ಎಂದು ನ್ಯಾಯಪೀಠ ಹೇಳಿತು.

ಸಿಬಿಐ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ಕೇಜ್ರಿವಾಲ್ ಮತ್ತು ಇತರರ ಪರ ವಾದ ಮಂಡಿಸಲು ನ್ಯಾಯಾಲಯ ವಕೀಲರನ್ನು ನೇಮಿಸುತ್ತದೆಯೇ’ ಎಂದು ಕೇಳಿದರು. ಇದಕ್ಕೆ ಸಕಾರಾತ್ಮಕವಾಗಿ ಉತ್ತರಿಸಿದ ನ್ಯಾಯಮೂರ್ತಿ, ‘ ಈ ಪ್ರಕರಣದಲ್ಲಿ ವಾದಿಸಲು ಮೂರು ಹಿರಿಯ ವಕೀಲರನ್ನು ನೇಮಿಸುತ್ತೇನೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.