ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

Published : 13 ಸೆಪ್ಟೆಂಬರ್ 2024, 6:20 IST
Last Updated : 13 ಸೆಪ್ಟೆಂಬರ್ 2024, 6:20 IST
ಫಾಲೋ ಮಾಡಿ
Comments

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಹಾಗೂ ಉಜ್ವಲ್ ಭುಯಾನ್ ಅವರ ನೇತೃತ್ವದ ಪೀಠವು ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ತೀರ್ಪು ಪ್ರಕಟಿಸಿದೆ.

₹10 ಲಕ್ಷ ಜಾಮೀನು ಬಾಂಡ್ ಮತ್ತು ಇಬ್ಬರು ಶ್ಯೂರಿಟಿಗಳ ಆಧಾರದಲ್ಲಿ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಂತೆ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಆದರೂ ಸುಪ್ರೀಂ ಕೋರ್ಟ್, ಕೇಜ್ರಿವಾಲ್ ತಮ್ಮ ಕಚೇರಿ ಅಥವಾ ದೆಹಲಿ ಕಾರ್ಯಾಲಯಕ್ಕೆ ಭೇಟಿ ನೀಡುವಂತಿಲ್ಲ ಮತ್ತು ಯಾವುದೇ ಅಧಿಕೃತ ಕಡತಕ್ಕೆ ಸಹಿ ಹಾಕುವಂತಿಲ್ಲ ಎಂದು ಹೇಳಿದೆ.

ಜಾಮೀನು ನಿರಾಕರಿಸಿದ್ದನ್ನು ಹಾಗೂ ಸಿಬಿಐ ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್, ಮೇಲ್ಮನವಿ ಸಲ್ಲಿಸಿದ್ದರು.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಜಾರಿ ನಿರ್ದೇಶನಾಲಯದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್, ಕೇಜ್ರಿವಾಲ್ ಅವರಿಗೆ ಈಗಾಗಲೇ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT