ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ನಿಯನ್ನು ಭೇಟಿ ಮಾಡಲು ಸಿಸೋಡಿಯಾಗೆ ಅನುಮತಿ

Published 2 ಜೂನ್ 2023, 15:21 IST
Last Updated 2 ಜೂನ್ 2023, 15:21 IST
ಅಕ್ಷರ ಗಾತ್ರ

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಪತ್ನಿಯನ್ನು ಭೇಟಿ ಮಾಡಲು ಎಎಪಿ ನಾಯಕ ಮನೀಷ್‌ ಸಿಸೋಡಿಯಾ ಅವರಿಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ಅನುಮತಿ ನೀಡಿದೆ.

ಪ್ರಸ್ತುತ, ಸಿಸೋಡಿಯಾ ಅವರು ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿದ್ದಾರೆ.

‘ಸಿಸೋಡಿಯಾ ಅವರು ಶನಿವಾರದಂದು ತಮ್ಮ ಮನೆಯಲ್ಲಿ ಪತ್ನಿಯನ್ನು ಭೇಟಿಯಾಗಬಹುದು’ ಎಂದು ನ್ಯಾಯಮೂರ್ತಿ ದಿನೇಶ್‌ ಕುಮಾರ್‌ ಶರ್ಮಾ ಅವರು ಹೇಳಿದ್ದಾರೆ.

‘ಸಿಸೋಡಿಯಾ ಅವರು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ತಮ್ಮ ಪತ್ನಿಯನ್ನು ಭೇಟಿ ಮಾಡಲು ಅವಕಾಶ ನೀಡಿ’ ಎಂದು ನ್ಯಾಯಮೂರ್ತಿ ಅವರು ತಿಹಾರ್ ಜೈಲು ಅಧೀಕ್ಷಕರಿಗೆ ನಿರ್ದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT