ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಬಕಾರಿ ನೀತಿ ಹಗರಣ: ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಮನೀಶ್ ಸಿಸೋಡಿಯಾ ಅರ್ಜಿ

Published 2 ಮೇ 2024, 6:22 IST
Last Updated 2 ಮೇ 2024, 6:22 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಹಾಗೂ ಭ್ರಷ್ಟಾಚಾರ ಆರೋಪದಲ್ಲಿ ತಮ್ಮ ವಿರುದ್ದ ಸಿಬಿಐ ಹಾಗೂ ಇ.ಡಿ ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ಜಾಮೀನು ಕೋರಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್‌ ಹಾಗೂ ನ್ಯಾಯಮೂರ್ತಿ ಮನ್‌ಮೀತ್ ಪಿ.ಎಸ್‌ ಅವರ ಪೀಠದ ಮುಂದೆ ಈ ಅರ್ಜಿ ಶುಕ್ರವಾರ ವಿಚಾರಣೆಗೆ ಬರಲಿದೆ.

ಆಪಾದಿತರು ಶಾಸಕರಾಗಿರುವುದರಿಂದ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಬೇಕು ಹಾಗೂ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಸಿಸೋಡಿಯಾ ಪರ ವಕೀಲರಾದ ಮೊಹಮ್ಮದ್‌ ಇರ್ಶಾದ್‌ ಪೀಠದ ಮುಂದೆ ಕೋರಿದರು.

ಏ.30ರಂದು ಎರಡೂ ಪ್ರಕರಣದಲ್ಲಿ ಸಿಸೋಡಿಯಾ ಅವರಿಗೆ ಜಾಮೀನು ನೀಡಲು ಕೆಳ ನ್ಯಾಯಾಲಯ ನಿರಾಕರಿಸಿತ್ತು. ಜಾಮೀನು ನೀಡಲು ಇದು ಸೂಕ್ತ ಸಮಯ ಅಲ್ಲ ಎಂದು ಅಭಿಪ್ರಾಯಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT