ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಬಕಾರಿ ಹಗರಣ: ಏ.​ 23ರವರೆಗೆ ಬಿಆರ್​ಎಸ್​ ನಾಯಕಿ ಕೆ. ಕವಿತಾಗೆ ನ್ಯಾಯಾಂಗ ಬಂಧನ

Published 15 ಏಪ್ರಿಲ್ 2024, 5:06 IST
Last Updated 15 ಏಪ್ರಿಲ್ 2024, 5:06 IST
ಅಕ್ಷರ ಗಾತ್ರ

ನವದೆಹಲಿ: ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಹಾಗೂ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರನ್ನು ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿಯ ನ್ಯಾಯಾಲಯ ಸೋಮವಾರ ಆದೇಶಿಸಿದೆ.

ಕವಿತಾ ಅವರ 3 ದಿನಗಳ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಸಿಬಿಐ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕವಿತಾ ಅವರನ್ನು ಮಾರ್ಚ್‌ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನ ನಿವಾಸದಿಂದ ಬಂಧಿಸಿ ತಿಹಾರ್‌ ಜೈಲಿನಲ್ಲಿ ಇರಿಸಿತ್ತು.

ನಂತರ ದೆಹಲಿಯ ವಿಶೇಷ ನ್ಯಾಯಾಲಯದ ಅನುಮತಿ ಪಡೆದ ಬಳಿಕ ಸಿಬಿಐ ಅಧಿಕಾರಿಗಳು ಏಪ್ರಿಲ್‌ 11ರಂದು ಅವರನ್ನು ಬಂಧಿಸಿದ್ದರು. ದೆಹಲಿ ನ್ಯಾಯಾಲಯ ಏಪ್ರಿಲ್‌ 15ರವರೆಗೆ ಸಿಬಿಐ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿತ್ತು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಸಿಬಿಐ ಕವಿತಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT