ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಬಕಾರಿ ನೀತಿ ಹಗರಣ: ಸಿಸೋಡಿಯಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್

Published 20 ಏಪ್ರಿಲ್ 2024, 12:28 IST
Last Updated 20 ಏಪ್ರಿಲ್ 2024, 12:28 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಹಾಗೂ ದೆಹಲಿಯ ಮಾಜಿ ಉಪ ಮು‌ಖ್ಯಮಂತ್ರಿ ಮನಿಶ್‌ ಸಿಸೋಡಿಯಾ ಅವರ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿ ನ್ಯಾಯಾಲಯವು ಏ.30ಕ್ಕೆ ಕಾಯ್ದಿರಿಸಿದೆ. 

ಸಿಸೋಡಿಯಾ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಹಾಗೂ‌ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆ ಆರೋಪದ ಎರಡೂ ಪ್ರಕರಣಗಳಲ್ಲಿ ಸಿಸೋಡಿಯಾ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದರು. 

ಸಿಬಿಐ ಮತ್ತು ಇ.ಡಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಸಿಸೋಡಿಯಾ ಹಾಗೂ ತನಿಖಾ ಸಂಸ್ಥೆಗಳ ಪರ ವಕೀಲರ ವಾದವನ್ನು ಆಲಿಸಿದ ಬಳಿಕ ತೀರ್ಪನ್ನು ಕಾಯ್ದಿರಿಸಿದರು. 

ಪ್ರಸ್ತುತ ರದ್ದಾಗಿರುವ ದೆಹಲಿಯ ಹಿಂದಿನ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿದೆ. ಪರವಾನಗಿ ನೀಡಲು ಆರೋಪಿತ ಅಧಿಕಾರಿಗಳು ಭ್ರಷ್ಟಾಚಾರ ಎಸಗಿದ್ದಾರೆ ಎಂದು ಇ.ಡಿ ಹಾಗೂ ಸಿಬಿಐ ಆರೋಪಿಸಿವೆ. 

ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಆರೋಪದಡಿ ಸಿಸೋಡಿಯಾ ಅವರನ್ನು ಕಳೆದ ವರ್ಷ ಫೆ.26ರಂದು ಸಿಬಿಐ ಬಂಧಿಸಿತ್ತು. ಇದೇ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದಡಿ ಮಾ.9 ರಂದು ಇ.ಡಿ ಅವರನ್ನು ಬಂಧಿಸಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT