ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಅತ್ಯಾಚಾರ ಆರೋಪ: ಬಿಜೆಪಿಯ ಉಚ್ಚಾಟಿತ ನಾಯಕ ಕಮಲ್ ರಾವತ್ ಬಂಧನ

Published 1 ಜನವರಿ 2024, 2:03 IST
Last Updated 1 ಜನವರಿ 2024, 2:03 IST
ಅಕ್ಷರ ಗಾತ್ರ

ಚಂಪಾವತ್(ಉತ್ತರಾಖಂಡ): ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಉತ್ತರಾಖಂಡದ ಚಂಪಾವತ್‌ನ ಉಚ್ಚಾಟಿತ ಬಿಜೆಪಿ ನಾಯಕ ಕಮಲ್ ರಾವತ್ ಅವರನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾವತ್ ಅವರನ್ನು ಭಾನುವಾರ ಸಂಜೆ ಚಂಪಾವತ್‌ನಲ್ಲಿ ಬಂಧಿಸಲಾಗಿದ್ದು, ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ಯೋಗೇಶ್ ಉಪಾಧ್ಯಾಯ ತಿಳಿಸಿದ್ದಾರೆ.

ಪೊಲೀಸರು ರಾವತ್ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಂತ್ರಸ್ತೆಯನ್ನು ಶನಿವಾರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಆದರೆ, ನ್ಯಾಯಾಲಯದಲ್ಲಿ ಇನ್ನಷ್ಟೇ ಹೇಳಿಕೆ ದಾಖಲಿಸಬೇಕಿದೆ.

ರಾವತ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿಯ ಚಂಪಾವತ್ ಜಿಲ್ಲಾಧ್ಯಕ್ಷ ನಿರ್ಮಲ್ ಮೆಹ್ರಾ ಹೇಳಿದ್ದಾರೆ.

ಈ ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್, ಸರ್ಕಾರದ ಪ್ರತಿಕೃತಿ ದಹಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT