ಲಖನೌ: ಗಾಜಿಯಾಬಾದ್‌ನ ಮೋದಿ ನಗರದ ಕಾರ್ಖಾನೆಯೊಂದರಲ್ಲಿ ಭಾನುವಾರ ಸಂಜೆ ಸ್ಫೋಟ ಸಂಭವಿಸಿ 7 ಮಂದಿ ಮೃತಪಟ್ಟಿದ್ದಾರೆ. 4 ಜನ ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಜಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿರುವುದು ಕ್ಯಾಂಡಲ್ ತಯಾರಿಕಾ ಕಾರ್ಖಾನೆಯಲ್ಲಿ ಎನ್ನಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸಂಜೆ 3 ಗಂಟೆ ವೇಳೆಗೆ ಸ್ಪೋಟ ಸಂಭವಿಸಿದೆ. ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಹಿತಿ ಪಡೆದುಕೊಂಡಿದ್ದು, ತನಿಖೆ ನಡೆಸುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಜಯ್ ಶಂಕರ್ ಪಾಂಡೆ ಅವರಿಗೆ ಸೂಚಿಸಿದ್ದಾರೆ. ದುರಂತದ ಬಗ್ಗೆ ಯೋಗಿ ಸಂತಾಪ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.