ನವದೆಹಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಾಲಿದಾ ಜಿಯಾ (79) ಅವರ ಅಂತ್ಯಕ್ರಿಯೆ ಬುಧವಾರ (ಡಿ.31) ನಡೆಯಲಿದೆ. ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಭಾರತದ ಪ್ರತಿನಿಧಿಯಾಗಿ ಖಾಲಿದಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಿಲಿಟರಿ ಆಡಳಿತದ ನಂತರ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮತ್ತು ದಶಕಗಳ ಕಾಲ ದೇಶದ ರಾಜಕೀಯದಲ್ಲಿ ಸಕ್ರಿಯವಾಗಿದ್ದ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಜಿಯಾ (79) ಮಂಗಳವಾರ ನಿಧನರಾದರು.

ಮೂರು ದಿನ ಶೋಕಾಚರಣೆ

ಇಂದು ಖಾಲಿದಾ ಜಿಯಾ ನಿಧನದ ಕಾರಣದಿಂದ ಬಾಂಗ್ಲಾದೇಶದಲ್ಲಿ ಮೂರು ದಿನ ಶೋಕಾಚರಣೆ ನಡೆಯಲಿದೆ. ಅಂತ್ಯಕ್ರಿಯೆ ನಡೆಯಲಿರುವ ಬುಧವಾರ ಸಾರ್ವಜನಿಕ ರಜೆ ಘೋಷಿಸಲಾಗಿದೆ ಎಂದು ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನುಸ್ ಪ್ರಕಟಿಸಿದರು. ಖಾಲಿದಾ ಅವರ ಅಂತ್ಯಸಂಸ್ಕಾರದ ವೇಳೆ ಮತ್ತು ದೇಶದಾದ್ಯಂತ ಶೋಕಾಚರಣೆಯ ಸಮಯದಲ್ಲಿ ಜನರು ಶಿಸ್ತು ಮತ್ತು ಶಾಂತಿ ಕಾಪಾಡಿಕೊಳ್ಳಬೇಕು ಎಂದು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಅವರು ಮನವಿ ಮಾಡಿದರು.
.ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಜಿಯಾ ನಿಧನ: ಸಾಗಿದ ಹಾದಿ ಹೀಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.