ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದಲ್ಲಿ ಹಿಂದೂ ದೇವಾಲಯ ವಿರೂಪ: ಸಚಿವ ಎಸ್‌. ಜೈಶಂಕರ್‌ ಖಂಡನೆ

Published 23 ಡಿಸೆಂಬರ್ 2023, 13:34 IST
Last Updated 23 ಡಿಸೆಂಬರ್ 2023, 13:34 IST
ಅಕ್ಷರ ಗಾತ್ರ

ಅಹಮದಾಬಾದ್‌ (ಗುಜರಾತ್‌): ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿನ ಹಿಂದೂ ದೇವಾಲಯವನ್ನು ವಿರೂಪಗೊಳಿಸಿರುವ ಪ್ರಕರಣ ಕುರಿತು 'ಉಗ್ರವಾದಿಗಳು ಮತ್ತು ಪ್ರತ್ಯೇಕತಾವಾದಿಗಳಿಗೆ ವಿದೇಶಗಳಲ್ಲಿ ಇಷ್ಟು ಸ್ವಾತಂತ್ರ್ಯ ದೊರಕಬಾರದು' ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಹೇಳಿದ್ದಾರೆ.

ಇಲ್ಲಿನ ರಾಷ್ಟ್ರಿಯ ರಕ್ಷಾ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವದಲ್ಲಿ ಅವರು ಶನಿವಾರ ಭಾಗವಹಿಸಿದ್ದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಂದೂ ದೇವಾಲಯವನ್ನು ವಿರೂಪಗೊಳಿಸಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.

‘ದೇಗುಲ ಧ್ವಂಸ ಪ್ರಕರಣದ ಕುರಿತ ಸುದ್ದಿ ನೋಡಿದೆ. ಇಂಥ ಘಟನೆ ನಡೆದಿರುವುದು ವಿಷಾದಕರ’ ಎಂದರು. 

ಕ್ಯಾಲಿಫೋರ್ನಿಯಾದ ನೀವಾರ್ಕ್‌ನಲ್ಲಿಯ ಪ್ರಮುಖ ಹಿಂದೂ ದೇವಾಲಯ ಶ್ರೀ ಸ್ವಾಮಿನಾರಾಯಣ ಮಂದಿರದಲ್ಲಿ ಈ ಕೃತ್ಯ ನಡೆದಿದೆ. ಅದರ ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಕೆತ್ತಲಾಗಿದೆ. 

ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಇದು ದ್ವೇಷಾಪರಾದ ಪ್ರಕರಣ ಇರಬಹುದೆಂದು ವಾರ್ಕ್‌ ನಗರ ಪೊಲೀಸರು ಶಂಕಿಸಿದ್ದಾರೆ. ಈ ಕೃತ್ಯವನ್ನು ಖಂಡಿಸಿರುವ ಸ್ಯಾನ್‌ಫ್ರಾನ್ಸಿಸ್ಕೊದಲ್ಲಿಯ ಭಾರತೀಯ ಕಾನ್ಸುಲೇಟ್‌, ಈ ಕುರಿತು ಅಮೆರಿಕ ಆಡಳಿತಕ್ಕೆ ದೂರು ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ದೇವಸ್ಥಾನದ ಎದುರಿರುವ ನಾಮಫಲಕದ ಮೇಲೆ ‘ಖಾಲಿಸ್ತಾನ’ ಎಂದು ಪೇಯಿಂಟ್‌ ಬಳಸಿ ಬರೆದಿರುವುದನ್ನು ಚಿತ್ರಗಳಲ್ಲಿ ಕಾಣಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT