ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಾಣಸಿ ಲೋಕಸಭಾ: ಇಂದು ನಾಮಪತ್ರ ಸಲ್ಲಿಸಲಿರುವ ಪ್ರಧಾನಿ ಮೋದಿ

Published 14 ಮೇ 2024, 2:50 IST
Last Updated 14 ಮೇ 2024, 2:50 IST
ಅಕ್ಷರ ಗಾತ್ರ

ನವದೆಹಲಿ: ವಾರಾಣಸಿ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಸ್ಪರ್ಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಸುವ ಮುನ್ನಾ ದಿನವಾದ ಸೋಮವಾರ ಪ್ರಧಾನಿ ಮೋದಿ, ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 6 ಕಿ. ಮೀ ರೋಡ್‌ ಶೋ ನಡೆಸಿದ್ದಾರೆ. ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ನಗರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ. ಈ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.

'ನಿಮ್ಮೆಲ್ಲರ ವಾತ್ಸಲ್ಯ ಮತ್ತು ಆಶೀರ್ವಾದ ಊಹೆಗೂ ನಿಲುಕದು. ನಾನು ತುಂಬಾ ಭಾವುಕನಾಗಿದ್ದೇನೆ. ನಿಮ್ಮ ಪ್ರೀತಿಯ ನೆರಳಿನಲ್ಲಿ 10 ವರ್ಷಗಳು ಹೇಗೆ ಕಳೆದವು ಎಂಬುದು ನನಗೆ ಅರ್ಥವಾಗಲಿಲ್ಲ' ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

5 ವಿಧಾನಸಭಾ ಸ್ಥಾನಗಳನ್ನು ಒಳಗೊಂಡಿರುವ ವಾರಾಣಸಿ ಹಲವು ವರ್ಷಗಳಿಂದ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿದೆ.

ಪ್ರಧಾನಿ ಮೋದಿಯವ ನಾಮಪತ್ರ ಸಲ್ಲಿಕೆ ವೇಳೆ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಪಸ್ಥಿತರಿರುವ ನಿರೀಕ್ಷೆಯಿದೆ.

ವಾರಾಣಸಿಯಲ್ಲಿ ಜೂನ್ 1 ರಂದು 7ನೇ ಮತ್ತು ಕೊನೆಯ ಹಂತದ ಚುನಾವಣೆ ನಡೆಯಲಿದೆ. ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್‌ ಕಣದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT