ಮುಂಬೈ: ರಾಜ್ಯದ ಬೀಡ್ನ ಕೋಚಿಂಗ್ ಕೇಂದ್ರದಲ್ಲಿ ನಡೆದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಹಿರಿಯ ಮಹಿಳಾ ಅಧಿಕಾರಿಯ ನೇತೃತ್ವದ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ವಹಿಸುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಮಂಗಳವಾರ ಘೋಷಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಎನ್ಸಿಪಿಯ ಚೇತನ್ ತುಪೆ ಅವರು, ‘ಘಟನೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ, ಆದರೆ ಅವರನ್ನು ಕೇವಲ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆರೋಪಿಗಳನ್ನು ಯಾರು ರಕ್ಷಣೆ ಮಾಡುತ್ತಿದ್ದಾರೆ’ ಎಂದು ಕೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಫಡಣವೀಸ್, ‘ಆರೋಪಿಗಳನ್ನು ರಕ್ಷಿಸಲು ಯಾರು ಯತ್ನಿಸುತ್ತಿದ್ದಾರೆಯೊ, ಅವರನ್ನು ಕೂಡಾ ಬಿಡುವುದಿಲ್ಲ. ಪ್ರಕರಣದ ತನಿಖೆಯನ್ನು ಎಸ್ಐಟಿ ಕಾಲಮಿತಿಯೊಳಗೆ ನಡೆಸುತ್ತದೆ ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ. ಮಹಿಳಾ ಅಧಿಕಾರಿಯೊಬ್ಬರು ತನಿಖಾ ತಂಡದ ನೇತೃತ್ವ ವಹಿಸಲಿದ್ದಾರೆ’ ಎಂದು ಹೇಳಿದರು.

2024ರ ಜುಲೈ 30ರಿಂದ 2025ರ ಮೇ 25ರ ನಡುವೆ 17 ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೀಡ್ನ ಶಿವಾಜಿನಗರ ಪೊಲೀಸರು ಕೋಚಿಂಗ್ ಸೆಂಟರ್ನ ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಾಲಕಿಯ ದೂರಿನ ಪ್ರಕಾರ, ಇಬ್ಬರು ಶಿಕ್ಷಕರು ಆಕೆಯನ್ನು ಕೋಚಿಂಗ್ ಸೆಂಟರ್ ಕಚೇರಿಗೆ ಕರೆಸಿ, ಬಟ್ಟೆ ಬಿಚ್ಚಿಸಿ ಅಶ್ಲೀಲ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.