ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉ.ಪ್ರದೇಶ ಸ್ಥಳೀಯ ಚುನಾವಣೆಯಲ್ಲಿ ನಕಲಿ ಮತದಾನದಿಂದ ಬಿಜೆಪಿ ಗೆಲುವು: ಅಖಿಲೇಶ್

Published 16 ಮೇ 2023, 14:40 IST
Last Updated 16 ಮೇ 2023, 14:40 IST
ಅಕ್ಷರ ಗಾತ್ರ

ಕನೌಜ್: ಉತ್ತರ ಪ್ರದೇಶ ನಗರ ಸ್ಥಳೀಯ ಸಂಸ್ಥೆಗಳಿಗೆ ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿ ಬಿಜೆಪಿ ಪರ ಮತ ಚಲಾವಣೆ ಮಾಡಲಾಗಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಉತ್ತರ ಪ್ರದೇಶ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿತ್ತು.

ಚುನಾವಣೆ ವೇಳೆ ಕೆಲವು ಅಧಿಕಾರಿಗಳು ಬಿಜೆಪಿ ನಾಯಕರ ಸೂಚನೆಯನ್ನು ಪಾಲಿಸುತ್ತಿದ್ದರು ಎಂದೂ ಅವರು ಆರೋಪಿಸಿದ್ದಾರೆ.

ಬಿಜೆಪಿ ರಾಜ್ಯದ ಎಲ್ಲಾ 17 ಮಹಾನಗರ ಪಾಲಿಕೆಗಳ ಮೇಯರ್ ಸ್ಥಾನಗಳ ಚುನಾವಣೆಗಳಲ್ಲಿ ಗೆಲುವು ದಾಖಲಿಸಿತ್ತು.

ಕನೌಜ್‌ನಲ್ಲಿ ಸಾವಿರಾರು ನಕಲಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಆಧಾರ್ ಕಾರ್ಡ್ ನಕಲಿಯಾದಾಗ ಮತಗಳು ನಕಲಿಯಾಗುತ್ತವೆ. ಬಿಜೆಪಿ ನಕಲಿ ಮತದಾನದಿಂದ ಗೆಲುವು ಸಾಧಿಸಿದೆ ಎಂದು ಆರೋಪ ಮಾಡಿದ್ದಾರೆ.

ಪ್ರಜಾಪ್ರಭುತ್ವದ ರಕ್ಷಣೆಗಾಗಿ ಎಲ್ಲರೂ ಸಿದ್ಧರಾಗಿರಬೇಕು ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಚುನಾವಣೆ ಫಲಿತಾಂಶ: ಇದು ಜನರ ಗೆಲುವು - ಅಖಿಲೇಶ್
ಕರ್ನಾಟಕ ಚುನಾವಣೆ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಜನರ ಗೆಲುವಾಗಿದೆ ಎಂದು ಹೇಳಿದರು. ಬಿಜೆಪಿ ಯಾವಾಗಲೂ ದ್ವೇಷ ರಾಜಕಾರಣ ಮಾಡುತ್ತದೆ. ಅದಕ್ಕೆ ಕರ್ನಾಟಕದ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT