ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಐಜಿಐ) ದೆಹಲಿ-ವಡೋದರಾ ಏರ್ ಇಂಡಿಯಾ ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆಯ ಪ್ರಕರಣ ವರದಿಯಾಗಿದೆ.

ವಿಮಾನದ ಶೌಚಾಲಯದಲ್ಲಿ 'ಬಾಂಬ್' ಎಂದು ಬರೆದಿಟ್ಟ ಟಿಶ್ಯೂ ಪೇಪರ್ ಅನ್ನು ಸಿಬ್ಬಂದಿ ಪತ್ತೆಹಚ್ಚಿದರು. ಈ ಬಗ್ಗೆ ತಿಳಿದ ಪ್ರಯಾಣಿಕರು ವಿಚಲಿತಗೊಂಡರು ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ಸಂಜೆ ಬಾಂಬ್ ಎಂದು ಬರೆದಿಟ್ಟ ಟಿಶ್ಯೂ ಪೇಪರ್ ಪತ್ತೆಯಾದ ಬೆನ್ನಲ್ಲೇ ವಿಮಾನದಲ್ಲಿ ಸಂಪೂರ್ಣ ತಪಾಸಣೆ ನಡೆಸಲಾಯಿತು. ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾತ್ರಿ ಏಳು ಗಂಟೆ ಹೊತ್ತಿಗೆ ವಿಮಾನ ಇನ್ನೇನು ಟೇಕ್ ಆಫ್ ಆಗುವ ಹೊತ್ತಿಗೆ ವಿಮಾನದ ಸಿಬ್ಬಂದಿ ಟಿಶ್ಯೂ ಪೇಪರ್ ಪತ್ತೆ ಹಚ್ಚಿದ್ದರು ಎಂದು ಅವರು ತಿಳಿಸಿದ್ದಾರೆ.

ತಕ್ಷಣವೇ ಸಿಐಎಸ್‌ಎಫ್ ಮತ್ತು ದೆಹಲಿ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿ ಸಮೀಪದ ಹೋಟೆಲ್‌ನಲ್ಲಿ ತಂಗಲು ವ್ಯವಸ್ಥೆ ಏರ್ಪಡಿಸಲಾಯಿತು ಎಂದು ಅವರು ತಿಳಿಸಿದ್ದಾರೆ.
.ಜೈಪುರ | 50ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಇ–ಮೇಲ್; ಆತಂಕ.ದೆಹಲಿ: ಎರಡು ಸರ್ಕಾರಿ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ.ಜೈಪುರ | 50ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಇ–ಮೇಲ್; ಆತಂಕ.ಬೆಂಗಳೂರು, ದೆಹಲಿ ಬಳಿಕ ಅಹಮದಾಬಾದ್ನ ಶಾಲೆಗಳಿಗೆ ಬಾಂಬ್ ಬೆದರಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.