ಪೂಜಾ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ದೆಹಲಿ ಪೊಲೀಸರು ಹಾಗೂ ಯುಪಿಎಸ್‌ಸಿಗೆ ನ್ಯಾಯಮೂರ್ತಿ ಸುಬ್ರಮಣಿಯಂ ಪ್ರಸಾದ್ ಅವರು ನೋಟಿಸ್ ನೀಡಿದರು. ‘ಪೂಜಾ ಅವರು ತನಿಖೆಗೆ ಸಹಕರಿಸಬೇಕು’ ಎಂದೂ ಅವರು ಹೇಳಿದರು. ಮುಂದಿನ ವಿಚಾರಣೆಯನ್ನು ಆಗಸ್ಟ್ 21ಕ್ಕೆ ಮುಂದೂಡಲಾಗಿದೆ.