ಶಹಜಹಾನ್‌ಪುರ(ಉತ್ತರ ಪ್ರದೇಶ) ನಕಲಿ ನೋಟುಗಳನ್ನು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ಶನಿವಾರ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಿಂದ ₹42,000 ಮುಖಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಗೋದಾಮಿನಲ್ಲಿ ನಕಲಿ ನೋಟುಗಳನ್ನು ಮುದ್ರಿಸಿದ್ದಕ್ಕಾಗಿ ಆರೋಪಿಗಳಾದ ಸಚಿನ್, ಅಖಿಲೇಶ್ ಮತ್ತು ವಿವೇಕ್ ಮೌರ್ಯ ಅವರನ್ನು ಬಂಧಿಸಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಸ್ ಆನಂದ್ ಮಾಹಿತಿ ನೀಡಿದ್ದಾರೆ.

ಆರೋಪಿಗಳು ನೋಟು ತಯಾರಿಸುತ್ತಿದ್ದ ಸ್ಥಳದಲ್ಲಿ ₹42,000 ನಕಲಿ ನೋಟುಗಳನ್ನು ಹಾಗೂ ನಕಲಿ ನೋಟುಗಳ ಮುದ್ರಣಕ್ಕೆ ಬಳಸಲಾದ ಕಚ್ಚಾ ವಸ್ತು, ಶಾಯಿ ಮತ್ತು ಪ್ರಿಂಟರ್ ಅನ್ನೂ ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಸಣ್ಣ ಪ್ರಮಾಣದಲ್ಲಿ ನಕಲಿ ನೋಟುಗಳನ್ನು ಮುದ್ರಿಸಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಚಲಾವಣೆ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಇವನ್ನೂ ಓದಿ: ಮಲೇಷ್ಯಾ ನಡುವಿನ ವ್ಯಾಪಾರ, ವಹಿವಾಟಿಗೆ ಭಾರತೀಯ ರೂಪಾಯಿ ಬಳಕೆ: ವಿದೇಶಾಂಗ ಇಲಾಖೆ

ಅಮುಲ್ ಹಾಲಿನ ಬೆಲೆ ಹೆಚ್ಚಳ

ಮಹಾರಾಷ್ಟ್ರ | ಆನ್ಲೈನ್ನಲ್ಲಿ ಉದ್ಯೋಗದ ಆಮಿಷ; ₹3.49 ಲಕ್ಷ ಕಳೆದುಕೊಂಡ ಟೆಕ್ಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.