ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಮೇಲೆ ಸುಳ್ಳು ಪ್ರಕರಣ; ಬಿಜೆಪಿ ದಾಖಲೆ ನಿರ್ಮಿಸಲು ಹೊರಟಿದೆಯೇ?: ಅಖಿಲೇಶ್

Published 23 ಮಾರ್ಚ್ 2024, 15:07 IST
Last Updated 23 ಮಾರ್ಚ್ 2024, 15:07 IST
ಅಕ್ಷರ ಗಾತ್ರ

ಲಖನೌ: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಸುಳ್ಳು ಪ್ರಕರಣಗಳಲ್ಲಿ ಜನರನ್ನು ಸಿಲುಕಿಸುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಸರ್ಕಾರ ಹಾಗೂ ನಾಯಕರು ಜನರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಸಾರ್ವತ್ರಿಕ ದಾಖಲೆ ನಿರ್ಮಿಸಲು ಹೊರಟಿದ್ದಾರೆಯೇ?, ಇಂತಹ ಅನೇಕ ಪ್ರಕರಣಗಳು ಉತ್ತರ ಪ್ರದೇಶದಲ್ಲೂ ನಡೆದಿವೆ. ಇಂತಹ ಬೆಳವಣಿಗೆಗಳನ್ನು ಗಮನಿಸುತ್ತಿರುವ ಜನರು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅಖಿಲೇಶ್‌ ಖಾಸಗಿ ಸುದ್ದಿ ಸಂಸ್ಥೆಗೆ ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಇ.ಡಿ ಬಂಧಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕೇವಲ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿಲ್ಲ, ಮುಖ್ಯಮಂತ್ರಿಗಳನ್ನೇ ಮುಟ್ಟುಗೋಲು ಹಾಕಿಕೊಳ್ಳಲು ಪ್ರಯತ್ನಿಸಿದೆ. ಸೋಲಿನ ಭೀತಿಯಿಂದ ಬಿಜೆಪಿ ಹೀಗೆ ಮಾಡುತ್ತಿಲ್ಲ, ಬಿಜೆಪಿ ಈಗಾಗಲೇ ಸೋತಿದೆ ಎಂದು ಅಖಿಲೇಶ್ ಕಿಡಿಕಾರಿದ್ದಾರೆ.

ದೇಶದ ಯುವಕರು, ಕಾರ್ಮಿಕರು ಹಾಗೂ ರೈತರು ಮತದಾನದ ಮೂಲಕವೇ ಮುಂದಿನ ದಿನಗಳಲ್ಲಿ ಬಿಜೆಪಿಗೆ ಉತ್ತರ ನೀಡಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT