ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲಮನ್ನಾ: ಕಡಿವಾಣ ಹಾಕಲು ರಾಜ್ಯಗಳಿಗೆ ತಾಕೀತು-ಆರ್‌ಬಿಐ ಎಚ್ಚರಿಕೆ

Last Updated 30 ಡಿಸೆಂಬರ್ 2018, 20:15 IST
ಅಕ್ಷರ ಗಾತ್ರ

ನವದೆಹಲಿ: ಕೃಷಿ ಸಾಲಮನ್ನಾ ಪ್ರವೃತ್ತಿಗೆ ಕಡಿವಾಣ ಹಾಕುವಂತೆ ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ರಾಜ್ಯ ಸರ್ಕಾರಗಳಿಗೆ ತಾಕೀತು ಮಾಡಿದೆ. ರಾಜ್ಯಸರ್ಕಾರಗಳ ಸಾಲಮನ್ನಾ ನಿರ್ಧಾರದಿಂದ ಭವಿಷ್ಯದಲ್ಲಿ ಬ್ಯಾಂಕ್‌ಗಳ ಕೃಷಿ ಸಾಲ ವಿತರಣೆ ಸಾಮರ್ಥ್ಯಕ್ಕೆ ದೊಡ್ಡ ಪೆಟ್ಟು ಬೀಳುವ ಸಾಧ್ಯತೆ ಇದೆ ಎಂದೂ ಎಚ್ಚರಿಕೆ ನೀಡಿದೆ.

ರಾಜ್ಯ ಸರ್ಕಾರಗಳ ಕೃಷಿ ಸಾಲಮನ್ನಾ ನಿರ್ಧಾರದಿಂದಾಗಿ ಬ್ಯಾಂಕ್‌ಗಳ ಕೃಷಿ ಸಾಲ ವಿತರಣೆ ಪ್ರಮಾಣ ಶೇ 70ರವರೆಗೂ ಕುಂಠಿತಗೊಂಡಿದೆ ಎಂದು ಆರ್‌ಬಿಐ ಹೇಳಿದೆ.

ಈ ಬೆಳವಣಿಗೆಯಿಂದ ಬ್ಯಾಂಕ್‌ಗಳ ಠೇವಣಿಗಳ ಮೇಲೆ ದುಷ್ಪರಿಣಾಮವಾಗಿದ್ದು, 2017ರ ನಂತರ ಒಂದೇ ವರ್ಷದಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಸುಸ್ತಿಸಾಲದ ಪ್ರಮಾಣ ಶೇ 6ರಷ್ಟು ಹೆಚ್ಚಾಗಿದೆ ಎಂದು ಹೇಳಿದೆ.

2016–17ರಲ್ಲಿ ಬ್ಯಾಂಕ್‌ಗಳ ಕೃಷಿ ಸಾಲ ನೀಡಿಕೆ ಪ್ರಮಾಣ ಶೇ 12.4ರಷ್ಟು ಪ್ರಗತಿ ಸಾಧಿಸಿತ್ತು. 2017–18ರಲ್ಲಿ ಸಾಮರ್ಥ್ಯ ಶೇ 3.8ಕ್ಕೆ ಕುಸಿದಿದೆ ಎಂದು ಆರ್‌ಬಿಐ ವರದಿ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ಕಳೆದ ಫೆಬ್ರುವರಿಯಲ್ಲಿ ಉತ್ತರ ಪ್ರದೇಶ ರೈತರ ಸಾಲಮನ್ನಾ ಘೋಷಿಸಿದ್ದರು. ಅದಾದ ನಂತರ ಕನಿಷ್ಠ ಎಂಟು ರಾಜ್ಯಗಳು ಅಂದಾಜು ಒಂದು ಲಕ್ಷ ಕೋಟಿಗೂ ಹೆಚ್ಚು ಮೊತ್ತದ ರೈತರ ಸಾಲವನ್ನು ಮನ್ನಾ ಮಾಡುವುದಾಗಿ ಘೋಷಿಸಿವೆ.

ಕರ್ನಾಟಕ, ಉತ್ತರ ಪ್ರದೇಶ, ಪಂಜಾಬ್‌, ಮಹಾರಾಷ್ಟ್ರ, ಛತ್ತೀಸಗಡ, ಮಧ್ಯಪ್ರದೇಶ ಸರ್ಕಾರಗಳು ಕೃಷಿ ಸಾಲಮನ್ನಾ ಮಾಡುವುದಾಗಿ ಹೇಳಿವೆ.

ಕರ್ನಾಟಕದ ಜೆಡಿಎಸ್‌–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ₹46,756.61 ಕೋಟಿ ಕೃಷಿ ಸಾಲಮನ್ನಾ ಮಾಡಿದೆ. ಸಾಲಮನ್ನಾ ಘೋಷಣೆ ಮಾಡಿದ ಎಲ್ಲ ರಾಜ್ಯಗಳ ಪೈಕಿ ಇದು ಅತ್ಯಂತ ದೊಡ್ಡ ಮೊತ್ತವಾಗಿದೆ.

ಪರಿಣಾಮಗಳು

*ಕೃಷಿ ಸಾಲಮನ್ನಾ ಕೃಷಿ ಸಾಲ ವಿತರಣೆ ಕುಂಠಿತ

* ಬ್ಯಾಂಕ್‌ ಕಾರ್ಯಾಚರಣೆ, ಠೇವಣಿಗಳ ಮೇಲೆ ವ್ಯತಿರಿಕ್ತ ಪರಿಣಾಮ

* ಬ್ಯಾಂಕ್‌ಗಳ ವಸೂಲಾಗದ ಸಾಲದ ಪ್ರಮಾಣ ಹೆಚ್ಚಳ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT