ಪಟಿಯಾಲ: ಶಂಭು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತ ರೇಶಮ್ ಸಿಂಗ್ (55) ಇಂದು (ಗುರುವಾರ) ವಿಷ ಸೇವಿಸಿ ಆತ್ಮಹತ್ಮೆ ಮಾಡಿಕೊಂಡಿದ್ದಾನೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಇದು ಪ್ರತಿಭಟನಾನಿರತ ಪ್ರದೇಶದಲ್ಲಿ ಕಳೆದ ಮೂರು ವಾರಗಳಲ್ಲಿ ನಡೆದ ಎರಡನೇ ಘಟನೆಯಾಗಿದೆ.

ರೇಶಮ್ ಸಿಂಗ್ ಶಂಭು ಗಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರೈತನನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವಿಗೀಡಾಗಿದ್ದಾನೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತರಿ ಆಗ್ರಹಿಸಿ ರೈತರು ಪಂಜಾಬ್ ಮತ್ತು ಹರಿಯಾಣದ ಶಂಭು ಗಡಿಯಲ್ಲಿ ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನಾನಿರತ ರೈತನ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ರೈತ ಮುಖಂಡ ತೇಜ್ವೀರ್ ಸಿಂಗ್ ಆರೋಪಿಸಿದ್ದಾರೆ.

'ರೈತರ ಸಮಸ್ಯೆಗಳನ್ನು ಬಗೆಹರಿಸದ ಕೇಂದ್ರ ಸರ್ಕಾರದ ವಿರುದ್ಧ ರೇಶಮ್ ಸಿಂಗ್ ಅಸಮಾಧಾನಗೊಂಡಿದ್ದನು. ಸುದೀರ್ಘ ಪ್ರತಿಭಟನೆಯ ಹೊರತಾಗಿಯೂ ಯಾವುದೇ ಪ್ರಯೋಜನ ಉಂಟಾಗಲಿಲ್ಲ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ' ಎಂದು ಅವರು ಹೇಳಿದ್ದಾರೆ.

ರಣ್ಜೋದ್ ಸಿಂಗ್ ಎಂಬ ರೈತ ಡಿಸೆಂಬರ್ 18ರಂದು ಶಂಭು ಗಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನು.

ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ರೈತರು, ಕಳೆದ ವರ್ಷ ಫೆಬ್ರುವರಿ 13ರಿಂದ ಶಂಭು ಮತ್ತು ಖಾನೌರಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರು ದೆಹಲಿಗೆ ಪಾದಯಾತ್ರೆ ನಡೆಸುವುದನ್ನು ಭದ್ರತಾ ಪಡೆ ತಡೆಹಿಡಿದಿದೆ. ಇದರಿಂದ ಗಡಿಯಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ.
.ಶಂಭು ಗಡಿ: ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕುಸ್ತಿಪಟು ವಿನೇಶ್ ಫೋಗಟ್.PHOTOS | ಪಂಜಾಬ್: ಜಲಫಿರಂಗಿ, ಅಶ್ರುವಾಯು ಮಧ್ಯೆ ರೈತರ ಪ್ರತಿಭಟನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.