ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.16ರಂದು ರೈತ ಸಂಘಟನೆಗಳಿಂದ ಭಾರತ್ ಬಂದ್: ರಾಕೇಶ್ ಟಿಕಾಯತ್

Published 24 ಜನವರಿ 2024, 10:47 IST
Last Updated 24 ಜನವರಿ 2024, 10:47 IST
ಅಕ್ಷರ ಗಾತ್ರ

ನೋಯ್ಡಾ: ರೈತರು ಬೆಳೆಯುವ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘಟನೆಗಳು ಫೆಬ್ರುವರಿ 16ರಂದು ಭಾರತ್ ಬಂದ್ ನಡೆಸಲು ನಿರ್ಧರಿಸಿವೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ರೈತ ಸಂಘಟನೆಗಳ ಹೋರಾಟಕ್ಕೆ ಬೆಂಬಲ ನೀಡಿ ವ್ಯಾಪಾರ, ವಹಿವಾಟು ಸ್ಥಗಿತಗೊಳಿಸುವಂತೆ ವ್ಯಾಪಾರಿಗಳು ಮತ್ತು ಸಾರಿಗೆ ಸಿಬ್ಬಂದಿಗೆ ಭಾರತೀಯ ಕಿಸಾನ್ ಯೂನಿಯನ್‌ನ(ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಮನವಿ ಮಾಡಿದ್ದಾರೆ.

‘ಫೆಬ್ರುವರಿ 16ಕ್ಕೆ ನಾವು ಭಾರತ್ ಬಂದ್‌ಗೆ ಕರೆ ನೀಡಿದ್ದೇವೆ. ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಸೇರಿದಂತೆ ಹಲವು ರೈತ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ. ಆ ದಿನ ರೈತರು ಸಹ ಹೊಲಗಳಿಗೆ ತೆರಳದೆ ಬಂದ್ ಆಚರಿಸಿ. ಇದೊಂದು ದೇಶಕ್ಕೆ ದೊಡ್ಡ ಸಂದೇಶ ರವಾನಿಸುತ್ತದೆ. ವ್ಯಾಪಾರಿಗಳು ಸಹ ಆ ದಿನ ವ್ಯಾಪಾರ ಸ್ಥಗಿತಗೊಳಿಸಬೇಕು ಮತ್ತು ಗ್ರಾಹಕರು ಖರೀದಿ ನಿಲ್ಲಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ’ ಎಂದು ಅವರು ಮುಜಾಫರ್‌ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಗ್ಯಾರಂಟಿ. ನಿರುದ್ಯೋಗ, ಅಗ್ನಿವೀರ್ ಯೋಜನೆಗೆ ವಿರೋಧ ಮತ್ತು ನಿವೃತ್ತರಾದವರಿಗೆ ಪಿಂಚಣಿ ಸಿಗದಿರುವುದು ಸಹ ದೊಡ್ಡ ಸಮಸ್ಯೆಯಾಗಿದ್ದು, ಆ ಎಲ್ಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದೇವೆ’ ಎಂದು ಹೇಳಿದರು.

ಇದು ಕೇವಲ ರೈತ ಸಂಘಟನೆಗಳ ಹೋರಾಟವಲ್ಲ. ಇತರೆ ಸಂಘಟನೆಗಳು ಸಹ ಇದರಲ್ಲಿ ಕೈಜೋಡಿಸಲಿವೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT