ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ದೇಶದಾದ್ಯಂತ ನಡೆದ ಚಕ್ಕಾ ಜಾಮ್ ಅಂತ್ಯ
LIVE
ಕೇಂದ್ರ ಸರ್ಕಾರದ ಮೂರು ಹೊಸ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿ ಗಡಿ ಪ್ರದೇಶಗಳಲ್ಲಿ ಠಿಕಾಣಿ ಹೂಡಿರುವ ರೈತರು ಇಂದು ದೇಶವ್ಯಾಪಿ 'ಚಕ್ಕಾ ಜಾಮ್' ಪ್ರತಿಭಟನೆಗೆ ಕರೆ ನೀಡಿದ್ದಾರೆ. ಅದರಂತೆ ಇಂದು ಮಧ್ಯಾಹ್ನ 12 ರಿಂದ 3ರ ನಡುವೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ಮೂರು ಗಂಟೆಗಳ ಕಾಲ ಬಂದ್ ಮಾಡಲು ರೈತರು ನಿರ್ಧರಿಸಿದ್ದಾರೆ. ಜನವರಿ 26 ಗಣರಾಜ್ಯೋತ್ಸವ ದಿನದಂದು ರೈತರು ನಡೆಸಿದ್ದ ಟ್ರ್ಯಾಕ್ಟರ್ ಪೆರೇಡ್, ಹಿಂಸಾಚಾರಕ್ಕೆ ತಿರುಗಿತ್ತು. ಹೀಗಾಗಿ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ದೆಹಲಿಯಲ್ಲಿ ರೈತರ ಸಂಚಾರವನ್ನು ತಡೆಯಲು ರಸ್ತೆಗಳಲ್ಲಿ ಮೊಳೆ, ಕಾಂಕ್ರೀಟ್ ಬ್ಯಾರಿಕೇಡ್ ಹಾಗೂ ತಂತಿಗಳನ್ನು ಸ್ಥಾಪಿಸಲಾಗಿದೆ. ಗಾಜಿಪುರ, ಟಿಕ್ರಿ ಹಾಗೂ ಸಿಂಘು ಗಡಿಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.