ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ರೈತರಿಗೆ ನಂಬಿಕೆಯಿಲ್ಲ: ರಾಹುಲ್ ಗಾಂಧಿ

Last Updated 25 ಸೆಪ್ಟೆಂಬರ್ 2020, 14:39 IST
ಅಕ್ಷರ ಗಾತ್ರ

ನವದೆಹಲಿ: ಹೊಸದಾಗಿ ಅಂಗೀಕರಿಸಿದ ಕೃಷಿ ಮಸೂದೆಗಳನ್ನು ಇಡೀ ದೇಶವೇ ವಿರೋಧಿಸುತ್ತಿದೆ ಎಂದಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಗ್ಗೆ ರೈತರಿಗೆ ನಂಬಿಕೆ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ರೈತರೊಂದಿಗೆ ಮಾತನಾಡಿದ ನಂತರ, ಅವರಿಗೆ ಮೋದಿ ಸರ್ಕಾರದ ಬಗ್ಗೆ ಯಾವುದೇ ನಂಬಿಕೆಯಿಲ್ಲ ಎಂಬುದು ಸ್ಪಷ್ಟವಾಗಿದೆ. ನಮ್ಮ ಧ್ವನಿಗಳು ನಮ್ಮ ರೈತ ಸಹೋದರರೊಂದಿಗಿದೆ. ಇಂದು ಇಡೀ ದೇಶವು ಈ ಕೃಷಿ ಮಸೂದೆಗಳನ್ನು ವಿರೋಧಿಸುತ್ತದೆ' ಎಂದು ಹಿಂದಿಯಲ್ಲಿ ಬರೆದಿದ್ದಾರೆ.

ರಾಹುಲ್ ಗಾಂಧಿ ಅವರು ಹಂಚಿಕೊಂಡಿರುವ ರೈತರೊಂದಿಗಿನ ಅವರ ಸಂವಾದದ ವಿಡಿಯೊದಲ್ಲಿ, ಈ ಕಾನೂನುಗಳು ದೇಶಾದಾದ್ಯಂತ ಇರುವ ರೈತರ ವಿರುದ್ಧವಾಗಿದೆ ಎಂದು ಹೇಳಲಾಗಿದೆ.

'ಈ ಮಸೂದೆಗಳಿಂದಸಾರ್ವಜನಿಕರಿಗೆ ಅಥವಾ ರೈತರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ. ಇದು ನಿಗಮಗಳಿಗೆ ಮಾತ್ರ ಪ್ರಯೋಜನವನ್ನು ನೀಡುತ್ತದೆ' ಎಂದು ರೈತರೊಬ್ಬರು ಹೇಳಿರುವುದು ವಿಡಿಯೊದಲ್ಲಿದೆ.

ಉಭಯ ಸದನಗಳಲ್ಲೂ ಇತ್ತೀಚೆಗಷ್ಟೇ ಅಂಗೀಕಾರಗೊಂಡ ಕೃಷಿಗೆ ಸಂಬಂಧಿಸಿದ ಪ್ರಮುಖ ಮಸೂದೆಗಳನ್ನು ವಿರೋಧಿಸಿ ವಿರೋಧ ಪಕ್ಷಗಳು, ರೈತರು ಮತ್ತು ಇತರೆ ಸಂಘಟನೆಗಳು ದೇಶದಾದ್ಯಂತ ಇಂದು ಬಂದ್‌ಗೆ ಕರೆ ನೀಡಿದ್ದವು. ಮಸೂದೆಯನ್ನು ವಿರೋಧಿಸಿ ಹಲವು ಕಡೆ ರೈತರು ಬೀದಿಗಿಳಿದಿದ್ದರು.

ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ 2020, ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020 ರಾಜ್ಯಸಭೆಯಲ್ಲಿಇತ್ತೀಚೆಗೆ ಧ್ವನಿ ಮತದಿಂದ ಅಂಗೀಕಾರಗೊಂಡಿತ್ತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT