ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರದಲ್ಲಿರುವ ಜನರಿಗೆ ರೈತರ ಬಗ್ಗೆ ಕಾಳಜಿ ಇಲ್ಲ: ಶರದ್‌ ಪವಾರ್‌

Published 23 ಮಾರ್ಚ್ 2024, 11:04 IST
Last Updated 23 ಮಾರ್ಚ್ 2024, 11:04 IST
ಅಕ್ಷರ ಗಾತ್ರ

ಪುಣೆ: ಅಧಿಕಾರದಲ್ಲಿರುವ ಜನರಿಗೆ ದೇಶದ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್‌ ಪವಾರ್‌ ಆರೋಪಿಸಿದ್ದಾರೆ. 2024ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆಯನ್ನು ಉಳಿಸಿಕೊಳ್ಳುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರದಲ್ಲಿ ರೈತರ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಈಗ ದೇಶದ ಪರಿಸ್ಥಿತಿ ಭಿನ್ನವಾಗಿದೆ. ಮುಂಬರುವ ಲೋಕಸಭಾ ಚುನಾವಣೆಯು ಬಹಳ ಮಹತ್ವದ್ದಾಗಿದೆ. 2024ರ ವೇಳೆಗೆ ರೈತರ ಆದಾಯ ದ್ವಿಗುಣಗೊಳ್ಳುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಒಮ್ಮೆ ಭರವಸೆ ನೀಡಿದ್ದರು. ಆದರೆ, ಅದು ನೆರವೇರಿಲ್ಲ’ ಎಂದು ಹೇಳಿದ್ದಾರೆ.

ಈರುಳ್ಳಿ ರಫ್ತಿನ ಮೇಲಿನ ನಿರ್ಬಂಧವನ್ನು ತೆರವುಗೊಳಿಸುವಂತೆ ರೈತರು ಒತ್ತಾಯಿಸುತ್ತಿದ್ದಾರೆ. ಆದರೆ, ಅಧಿಕಾರದಲ್ಲಿರುವ ಜನರು ರೈತರ ಬಗ್ಗೆ ಯಾವುದೇ ಕಾಳಜಿಯನ್ನು ತೋರಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ರ್‍ಯಾಲಿಯಲ್ಲಿ ಮಹಾ ವಿಕಾಸ ಅಘಾಡಿಯ (ಎಂವಿಎ) ನಾಯಕರಾದ ಸಂಜಯ್‌ ರಾವುತ್‌, ಬಾಳಾಸಾಹೇಬ್‌ ಥೋರಟ್‌ ಮತ್ತು ಸುಪ್ರಿಯಾ ಸುಳೆ ಭಾಗವಹಿಸಿದ್ದರು.

ಮಹಾರಾಷ್ಟ್ರದಲ್ಲಿ ಏಪ್ರಿಲ್‌ 19 ರಿಂದ ಮೇ 20ರವರೆಗೆ ಐದು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT