ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೈತರ ಪ್ರತಿಭಟನೆ | ದೆಹಲಿಯಲ್ಲಿ ಟ್ರಾಫಿಕ್‌ ಜಾಮ್‌: ಪೊಲೀಸ್

Published 6 ಮಾರ್ಚ್ 2024, 12:25 IST
Last Updated 6 ಮಾರ್ಚ್ 2024, 12:25 IST
ಅಕ್ಷರ ಗಾತ್ರ

ನವದೆಹಲಿ: ರೈತರ ಪ್ರತಿಭಟನೆಯಿಂದಾಗಿ ಬುಧವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು ಎಂದು ಪೊಲೀಸರು ಹೇಳಿದರು.

ವರದಿಗಳ ಪ್ರಕಾರ, ಬೆಳಿಗ್ಗೆಯಿಂದಲೇ ದೆಹಲಿ–ಹರಿಯಾಣ ಮಾರ್ಗದ ಸಿಂಘು ಗಡಿಯಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿತ್ತು.

ಟಿಕ್ರಿ, ಸಿಂಘು ಮತ್ತು ಗಾಜಿಪುರ ಗಡಿಗಳು, ರೈಲು ಹಾಗೂ ಮೆಟ್ರೊ ನಿಲ್ದಾಣಗಳಲ್ಲಿ ಭಾರಿ ನಿಗಾ ವಹಿಸಲಾಗಿದೆ. ಎಲ್ಲಾ ಗಡಿಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಗಡಿ ಅಥವಾ ರಸ್ತೆಯನ್ನು ಮುಚ್ಚಿಲ್ಲ. ಬದಲಾಗಿ ವಾಹನ ತಪಾಸಣೆ ನಡೆಸಲಾಗುತ್ತಿದೆ ಎಂದು ಹೇಳಿದರು.

ದೆಹಲಿಯಲ್ಲಿ ಈಗಾಗಲೇ ಸೆಕ್ಷನ್‌ 144 ಜಾರಿ ಮಾಡಲಾಗಿದೆ. ಜನರು ಗುಂಪುಗೂಡಲು ಅವಕಾಶ ನೀಡುತ್ತಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದರು.

ರೈತರು ಬುಧವಾರ ರಾಷ್ಟ್ರ ರಾಜಧಾನಿ ತಲುಪಬೇಕು ಎಂದು ಕಿಸಾನ್‌ ಮಜ್ದೂರ್‌ ಮೋರ್ಚಾ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ ಭಾನುವಾರ ಕರೆ ನೀಡಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT