ಶ್ರೀನಗರ: ‘ಮಿಲಾದ್–ಉನ್–ನಬಿ ಆಚರಣೆಯ ಹಿನ್ನೆಲೆಯಲ್ಲಿ ಶುಕ್ರವಾರ ಹಝರತ್‌ಬಲ್ದರ್ಗಾಕ್ಕೆ ಪ್ರಾರ್ಥನೆ ಸಲ್ಲಿಸಲು ಹೊರಟಿದ್ದ ತಮ್ಮ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಅಧಿಕಾರಿಗಳು ನಿವಾಸದಿಂದ ಹೊರ ಹೋಗದಂತೆ ತಡೆದಿದ್ದಾರೆ'ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷ ಆರೋಪಿಸಿದೆ.

‘ಜಮ್ಮ ಮತ್ತು ಕಾಶ್ಮೀರ ಸರ್ಕಾರದ ಅಧಿಕಾರಿಗಳು ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಪ್ರಾರ್ಥನೆ ಸಲ್ಲಿಸಲು ಹಝರತ್‌ಬಲ್ ದರ್ಗಾಕ್ಕೆ ತೆರಳದಂತೆ ತಡೆಯೊಡ್ಡಿದ್ದಾರೆ. ಮಿಲಾದ್–ಉನ್–ನಬಿ ಯಂತಹ ಶುಭ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡದೇ, ವ್ಯಕ್ತಿಯೊಬ್ಬರ ಮೂಲಭೂತ ಹಕ್ಕನ್ನು ಕಿತ್ತುಕೊಂಡಿದ್ದಾರೆ‘ ಎಂದು ಜೆಕೆಎನ್‌ಸಿ ಪಕ್ಷ ಟ್ವಿಟರ್‌ನಲ್ಲಿ ಆರೋಪಿಸಿದೆ.

ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಆಡಳಿತದ ಯಾವುದೇ ಅಧಿಕಾರಿ ಸಂಪರ್ಕಕ್ಕೆ ಲಭ್ಯವಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.