ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ಇ.ಡಿ ಮುಂದೆ ಹಾಜರಾಗದ ಫಾರೂಕ್‌

Published 11 ಜನವರಿ 2024, 14:28 IST
Last Updated 11 ಜನವರಿ 2024, 14:28 IST
ಅಕ್ಷರ ಗಾತ್ರ

ಶ್ರೀನಗರ: ಹಣದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮಿರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌ (ಎನ್‌ಸಿ) ಪಕ್ಷದ ಅಧ್ಯಕ್ಷ ಫಾರೂಕ್‌ ಅಬ್ದುಲ್ಲಾ ಅವರು ಅನಾರೋಗ್ಯದ ಕಾರಣ ನೀಡಿ ಜಾರಿ ನಿರ್ದೇಶನಾಲಯ (ಇ.ಡಿ) ಮುಂದೆ ಗುರುವಾರ ವಿಚಾರಣೆಗೆ ಹಾಜರಾಗಲಿಲ್ಲ.

ಜಮ್ಮು ಮತ್ತು ಕಾಶ್ಮೀರದ ಕ್ರಿಕೆಟ್‌ ಅಸೋಸಿಯೇಷನ್‌ನಲ್ಲಿ (ಜೆಕೆಸಿಎ) ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಫಾರೂಕ್‌ ಅವರಿಗೆ ಸಮನ್ಸ್‌ ನೀಡಲಾಗಿತ್ತು.  

ಫಾರೂಕ್‌ ಅವರು ಜೆಕೆಸಿಎ ಮುಖ್ಯಸ್ಥರಾಗಿದ್ದಾಗ, ಅಸೋಸಿಯೇಷನ್‌ಗೆ ಸೇರಿದ ಹಣವನ್ನು ಹಲವು ವೈಯಕ್ತಿಕ ಬ್ಯಾಂಕ್‌ ಖಾತೆಗೆಳಿಗೆ ವರ್ಗಾಯಿಸಲಾಗಿತ್ತು ಎನ್ನಲಾಗಿದೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT