ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ಅತ್ಯಾಚಾರ: ಆತ್ಮಹತ್ಯೆ ಮಾಡಿಕೊಂಡಿದ್ದ ಬಾಲಕಿಯ ತಂದೆ ಮೃತದೇಹ ಪತ್ತೆ

Published 7 ಮಾರ್ಚ್ 2024, 14:19 IST
Last Updated 7 ಮಾರ್ಚ್ 2024, 14:19 IST
ಅಕ್ಷರ ಗಾತ್ರ

ಹಮೀರ್‌ಪುರ: ಕಾನ್ಪುರದಲ್ಲಿ ಈಚೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಇಬ್ಬರು ಬಾಲಕಿಯರ ಪೈಕಿ ಒಬ್ಬ ಬಾಲಕಿಯ ತಂದೆಯ ಮೃತದೇಹ ಸಿಸೋಲಾರ್ ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದರು.

45 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹವು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವಿವರಿಸಿದರು. ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯರ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದರು.

‘ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ರಾಜಿ ಸಂಧಾನಕ್ಕೆ ಒಪ್ಪಿಕೊಳ್ಳುವಂತೆ ಬಾಲಕಿಯ ತಂದೆಗೆ ಆರೋಪಿಗಳ ಕಡೆಯವರು ಒತ್ತಡ ಹೇರಿದ್ದರು’ ಎಂದು ಮೃತ ವ್ಯಕ್ತಿಯ ಸಂಬಂಧಿಕರೊಬ್ಬರು ಆರೋಪಿಸಿದರು. ಮೃತರ ಕುಟುಂಬದ ಆರೋಪಗಳ ಕುರಿತು ಪ್ರತಿಕ್ರಿಯಿಸಲು ಪೊಲೀಸರು ನಿರಾಕರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT