ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈಬರ್ ಅಪರಾಧಗಳ ಪತ್ತೆ: ದೆಹಲಿ ಪೊಲೀಸ್ ಆಯುಕ್ತರ ಭೇಟಿ ಮಾಡಿದ FBI ನಿರ್ದೇಶಕ

Published 12 ಡಿಸೆಂಬರ್ 2023, 16:03 IST
Last Updated 12 ಡಿಸೆಂಬರ್ 2023, 16:03 IST
ಅಕ್ಷರ ಗಾತ್ರ

ನವದೆಹಲಿ: ಅಂತರರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಪಿಡುಗಾಗಿರುವ ತಂತ್ರಜ್ಞಾನ ಆಧಾರಿತ ಅಪರಾಧಗಳನ್ನು ಎದುರಿಸುವ ಸವಾಲು ಹಾಗೂ ಸೈಬರ್ ಅಪರಾಧಗಳನ್ನು ಭೇದಿಸಲು ಅಗತ್ಯವಿರುವ ಸಹಕಾರ ಕುರಿತು ಎಫ್‌ಬಿಐ ನಿರ್ದೇಶಕ ಕ್ರಿಷ್ಟೋಫರ್ ಎ. ವ್ರೇ ಅವರು ದೆಹಲಿ ಪೊಲೀಸ್ ಆಯುಕ್ತ ಸಂಜಯ್ ಅರೋರಾ ಅವರನ್ನು ಮಂಗಳವಾರ ಭೇಟಿಯಾಗಿ ಚರ್ಚಿಸಿದರು.

‘ಎರಡೂ ರಾಷ್ಟ್ರಗಳ ತನಿಖಾ ಸಂಸ್ಥೆಗಳು ಪ್ರತ್ಯೇಕ ಕಾನೂನುಗಳನ್ನು ಹೊಂದಿವೆ. ಇಂಥ ಸಂದರ್ಭದಲ್ಲಿ ಇರುವ ಸಾಧ್ಯತೆ, ಸವಾಲು ಹಾಗೂ ವ್ಯವಸ್ಥೆ ಕುರಿತು ಉಭಯ ಸಂಸ್ಥೆಗಳ ಸಹಕಾರ ಕುರಿತು ಚರ್ಚಿಸುವ ಅಗತ್ಯವಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟರು’ ಎಂದು ದೆಹಲಿ ಪೊಲೀಸರು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

‘ಅಂತರರಾಷ್ಟ್ರೀಯ ಅಪರಾಧಗಳ ವಿಷಯದಲ್ಲಿ ಅಪರಾಧಿಗಳ ಮಾಹಿತಿಯನ್ನು ಹಂಚಿಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ಎದುರಾಗುತ್ತಿರುವ ಸವಾಲುಗಳನ್ನು ಎದುರಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಅಪರಾಧಿಗಳು ತಪ್ಪಿಸಿಕೊಳ್ಳಲು ಯಾವುದೇ ಅವಕಾಶವಿಲ್ಲದಂತೆ ಮಾಡಲು ಹಾಗೂ ಬೇರೆ ಯಾವುದೇ ದೇಶದಲ್ಲಿ ಅಡಗಿಕೊಳ್ಳದಂತೆ ಎಚ್ಚರ ವಹಿಸುವ ಅಗತ್ಯವಿದೆ. ಇದರಲ್ಲಿ ದೆಹಲಿ ಪೊಲೀಸರು ಹಾಗೂ ಎಫ್‌ಬಿಐ ನಡುವಿನ ಸಹಕಾರ ಅಗತ್ಯ’ ಎಂದು ವ್ರೇ ಹೇಳಿದ್ದಾರೆ.

ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಸೋಮವಾರ ಭೇಟಿ ನೀಡಿ ಚರ್ಚಿಸಿದ್ದರು. ಈ ಸಂದರ್ಭದಲ್ಲಿ ಸಿಖ್‌ ಪ್ರತ್ಯೇಕತಾವಾದಿಗಳಾದ ಖಲಿಸ್ತಾನಿಗಳ ಕುರಿತ ಗುಪ್ತಚರ ಮಾಹಿತಿಯನ್ನು ಹಂಚಿಕೊಳ್ಳುವಂತೆ ಕ್ರಿಸ್ಟೋಫರ್ ಅವರಿಗೆ ಸೂದ್ ಮನವಿ ಮಾಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT