ಎಎಪಿ ಪಕ್ಷದ ಚುನಾಯಿತ ಜನಪ್ರತಿನಿಧಿಗಳ ಮೊದಲ ರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಮೋದಿ ಸರ್ಕಾರವು ತನ್ನ ಪಕ್ಷದ ಸಚಿವರು ಹಾಗೂ ಮುಖಂಡರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿದೆ. ಏಕೆಂದರೆ ಗುಜರಾತ್‌ನಲ್ಲಿ ಎಎಪಿಯ ಬೆಳೆದು ಬರುತ್ತಿರುವ ಜನಪ್ರಿಯತೆಯನ್ನು ಬಿಜೆಪಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.