ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುನೋ: ಚೀತಾ ‘ಧಾತ್ರಿ‘ ಸಾವು; 5 ತಿಂಗಳಲ್ಲಿ ಮೃತ ಚೀತಾಗಳ ಸಂಖ್ಯೆ 9ಕ್ಕೆ ಏರಿಕೆ

Published 2 ಆಗಸ್ಟ್ 2023, 9:52 IST
Last Updated 2 ಆಗಸ್ಟ್ 2023, 9:52 IST
ಅಕ್ಷರ ಗಾತ್ರ

ಭೋಪಾಲ್: ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಚೀತಾ ‘ಧಾತ್ರಿ‘ ಬುಧವಾರ ಬೆಳಗ್ಗೆ ಮೃತಪಟ್ಟಿದೆ. ಕಳೆದ ಐದು ತಿಂಗಳ ಅವಧಿಯಲ್ಲಿ ಮೃತಪಟ್ಟ ಚೀತಾಗಳ ಸಂಖ್ಯೆ 9ಕ್ಕೇರಿದೆ.

‘ಧಾತ್ರಿ‘ ಸಾವಿಗೆ ಕಾರಣ ತಿಳಿದುಬಂದಿಲ್ಲ. ‘ಧಾತ್ರಿ‘ಯ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು ವರದಿ ಬಂದ ಕೂಡಲೇ ನಿಖರವಾದ ಕಾರಣ ತಿಳಿಯಲಿದೆ ಎಂದು ಉದ್ಯಾನವನದ ಅಧಿಕಾರಿಗಳು ಹೇಳಿದ್ದಾರೆ. 

ಉದ್ಯಾನವನದಲ್ಲಿ‌ರುವ 14 ಚೀತಾಗಳು ಆರೋಗ್ಯವಾಗಿವೆ. ಇವುಗಳಲ್ಲಿ 7 ಗಂಡು, 6 ಹೆಣ್ಣು ಸೇರಿದಂತೆ ಒಂದು ಮರಿ ಚೀತಾ ಇದೆ. ಇವುಗಳ ಆರೋಗ್ಯವನ್ನು ಉದ್ಯಾನವನದ ವನ್ಯಜೀವಿ ಪಶುವೈದ್ಯರು ಮತ್ತು ನಮೀಬಿಯಾದ ತಜ್ಞರು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಎರಡು ಚೀತಾಗಳನ್ನು ಉದ್ಯಾನವನದಿಂದ ಕಾಡಿಗೆ ಬಿಡಲಾಗಿತ್ತು. ಇವುಗಳ ಪೈಕಿ ಒಂದು ಚೀತಾ ಮೃತಪಟ್ಟಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಕಳೆದ ವರ್ಷ ಸೆಪ್ಟೆಂಬರ್‌ ತಿಂಗಳಲ್ಲಿ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ 20 ವಯಸ್ಕ ಚೀತಾಗಳನ್ನು ಕುನೊ ರಾಷ್ಟ್ರೀಯ ಉದ್ಯಾನಕ್ಕೆ ತರಲಾಗಿತ್ತು. ಇವುಗಳಿಗೆ ಮೂರು ಮರಿಗಳು ಜನಿಸಿದ್ದರಿಂದ ಈ ಚೀತಾಗಳ ಸಂಖ್ಯೆ 23ಕ್ಕೆ ಏರಿಕೆಯಾಗಿತ್ತು. 

ಇವುಗಳ ಪೈಕಿ 9 ಸಾವನ್ನಪ್ಪಿದ್ದು 14 ಚೀತಾಗಳು ಆರೋಗ್ಯವಾಗಿವೆ ಎಂದು ಉದ್ಯಾನವನದ ಅಧಿಕಾರಿಗಳು ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT